Ashes 2025: ಮೂರಕ್ಕೆ ಮೂರು… ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Australia vs England, 3rd Test: ಮೊದಲ ಇನಿಂಗ್ಸ್ನಲ್ಲಿನ 85 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ 349 ರನ್ಗಳಿಸಿ ಆಲೌಟ್ ಆಗಿತ್ತು. ಇತ್ತ ಮೊದಲ ಇನಿಂಗ್ಸ್ನಲ್ಲಿನ ಹಿನ್ನಡೆಯೊಂದಿಗೆ 435 ರನ್ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 352 ರನ್ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯವನ್ನು 82 ರನ್ಗಳಿಂದ ಗೆದ್ದುಕೊಂಡಿದೆ.
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ತಲಾ 8 ವಿಕೆಟ್ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 82 ರನ್ಗಳ ಗೆಲುವು ದಾಖಲಿಸಿದೆ.
ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್ನಲ್ಲಿ 371 ರನ್ ಕಲೆಹಾಕಿದರೆ, ಇಂಗ್ಲೆಂಡ್ 286 ರನ್ಗಳಿಗೆ ಆಲೌಟ್ ಆಗಿತ್ತು.
ಇನ್ನು ಮೊದಲ ಇನಿಂಗ್ಸ್ನಲ್ಲಿನ 85 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ 349 ರನ್ಗಳಿಸಿ ಆಲೌಟ್ ಆಗಿತ್ತು. ಇತ್ತ ಮೊದಲ ಇನಿಂಗ್ಸ್ನಲ್ಲಿನ ಹಿನ್ನಡೆಯೊಂದಿಗೆ 435 ರನ್ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 352 ರನ್ಗಳಿಸಿ ಸರ್ವಪತನ ಕಂಡಿದೆ. ಈ ಮೂಲಕ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯವನ್ನು 82 ರನ್ಗಳಿಂದ ಗೆದ್ದುಕೊಂಡಿದೆ.
ಇದೀಗ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮೂರು ಮ್ಯಾಚ್ಗಳಲ್ಲೂ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದ್ದು, ಇನ್ನುಳಿದ ಎರಡು ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಆ್ಯಶಸ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಜೇಕ್ ವೆದರಾಲ್ಡ್, ಟ್ರಾವಿಸ್ ಹೆಡ್, ಮಾರ್ನಸ್ ಲ್ಯಾಬುಶೇನ್, ಉಸ್ಮಾನ್ ಖ್ವಾಜಾ, ಕ್ಯಾಮರೋನ್ ಗ್ರೀನ್, ಜೋಶ್ ಇಂಗ್ಲಿಸ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮ್ಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೊಲ್ಯಾಂಡ್.
ಇಂಗ್ಲೆಂಡ್ ಪ್ಲೇಯಿಂಗ್ 11: ಝಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ವಿಲ್ ಜ್ಯಾಕ್ಸ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಜೋಶ್ ಟಂಗ್.
