ಕಾಣಿಯೂರು ಸಮೀಪದ ಬೈತಡ್ಕ ಬಳಿ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿದ ಕಾರು, ಎದೆ ಝಲ್ ಎನಿಸುವ ದೃಶ್ಯ
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಿಯಂತ್ರಣ ತಪ್ಪಿ ಹೊಳೆಗೆ ಕಾರು ಉರುಳಿ ಬಿದ್ದಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳೆದ ವರ್ಷ ಇದೇ ಸ್ಥಳದಲ್ಲಿ ಕಾರು ಹೊಳೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಸೇತುವೆಗೆ ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರು ಎಷ್ಟೇ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಮಂಗಳೂರು, ಡಿ.29: ನಿಯಂತ್ರಣ ತಪ್ಪಿ ಹೊಳೆಗೆ ಕಾರು ಉರುಳಿ ಬಿದ್ದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೆಳಂದೂರಿನ ಜ್ಯೋತಿಷಿ ಪ್ರಸಾದ್ ಪಂಗಣ್ಣಾಯ ಅವರು ಚಲಾಯಿಸುತ್ತಿದ್ದ ಕಾರು ತಿರುವಿನಲ್ಲಿ ನಿಯಂತ್ರಣ ತಪ್ಪಿದ್ದು ತಡೆಗೋಡೆ ಇಲ್ಲದ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಸದ್ಯ ಸಣ್ಣಪುಟ್ಟ ಗಾಯದಿಂದ ಕಾರು ಚಾಲಕ ಪ್ರಣಾಪಾಯದಿಂದ ಪಾರಾಗಿದ್ದಾರೆ.
ಕಳೆದ ವರ್ಷ ಇದೇ ಸ್ಥಳದಲ್ಲಿ ಕಾರು ಹೊಳೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಸೇತುವೆಗೆ ತಡೆಗೋಡೆ ನಿರ್ಮಿಸುವಂತೆ ಸಾರ್ವಜನಿಕರು ಎಷ್ಟೇ ಒತ್ತಾಯಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ದುರ್ಘಟನೆ ನಡೆದರೂ ಆಡಳಿತ ಮಂಡಳಿ, ಜನಪ್ರತಿನಿಧಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ
Published on: Dec 29, 2023 02:12 PM
Latest Videos