AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಕಿಸುವ ಭರದಲ್ಲಿ ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ

ಟೀಕಿಸುವ ಭರದಲ್ಲಿ ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ

ಪ್ರಶಾಂತ್​ ಬಿ.
| Edited By: |

Updated on: Aug 18, 2024 | 2:49 PM

Share

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು(ಭಾನುವಾರ) ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ(PM Narendraswamy) ನಾಲಿಗೆ ಹರಿಬಿಟ್ಟಿದ್ದಾರೆ.

ಮಂಡ್ಯ, ಆ.18: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು(ಭಾನುವಾರ) ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ(PM Narendraswamy) ನಾಲಿಗೆ ಹರಿಬಿಟ್ಟಿದ್ದಾರೆ. ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ‘ಸುಪ್ರೀಂ ಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದಿದ್ದಾರೆ.

ಕುಮಾರಸ್ವಾಮಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಸೋಕೆ ಲೋಕಾಯುಕ್ತ ಕೇಳಿದ್ದಾರೆ. ಆದ್ರೆ, 8 ತಿಂಗಳಿಂದ ಹಾಗೇ ಕುಳಿತಿದ್ದಿಯಲ್ಲಪ್ಪ. ಮಹಾನ್ ಇಂಡಸ್ಟ್ರಿಯಲಿಸ್ಟ್ ನಿರಾಣೆದು 108 ಹಗರಣವಿದೆ. ಶಶಿಕಲಾ ಜೊಲ್ಲೆ ವಿಚಾರದಲ್ಲಿ ಜೊಲ್ಲು ಸುರಿಸಿಕೊಂಡು ಕುಳ್ತಿದ್ದೀಯಲ್ಲಪ್ಪ. ಘನವೆತ್ತ ರಾಜ್ಯಪಾಲ ನಿನಗೆ ತಾಕತ್ತಿದ್ದರೇ ಅವರ ಮೇಲೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡು. ನಮ್ಮ ಸಿದ್ದರಾಮಯ್ಯ ತಪ್ಪು ಮಾಡಿದ್ರೆ ಅವರ ಜೊತೆ ನಮಗೂ ಶಿಕ್ಷೆಕೊಡು. ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಹೇಡಿಗಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More