ಆನೇಕಲ್ BSP ಅಭ್ಯರ್ಥಿಯ ವಿಭಿನ್ನ ಕ್ರಮ; ಅಣಕು ಆನೆ ಮೇಲೆ ಬಂದು ನಾಮಪತ್ರ ಸಲ್ಲಿಕೆ
ಆನೇಕಲ್ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ಅವರು ಪಕ್ಷದ ಚುನಾವಣಾ ಚಿಹ್ನೆಯಾದ ಅಣಕು ಆನೆ ಮೇಲೆ ಸವಾರಿ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಪ್ರತಿಯೊಂದು ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಆನೇಕಲ್ನಲ್ಲಿ ಅಭ್ಯರ್ಥಿ ಒಬ್ಬರು ವಿಭಿನ್ನವಾಗಿ ನಾಮಪತ್ರ ಸಲ್ಲಿಸಿ ಎಲ್ಲರ ಗಮನಸೆಳೆದಿದ್ದಾರೆ. ಆನೇಕಲ್ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಡಾ. ಚಿನ್ನಪ್ಪ ವೈ ಚಿಕ್ಕಹಾಗಡೆ ಅವರು ಪಕ್ಷದ ಚುನಾವಣಾ ಚಿಹ್ನೆಯಾದ ಅಣಕು ಆನೆ (mock elephant) ಮೇಲೆ ಸವಾರಿ ಮಾಡಿ ನಾಮಪತ್ರ ಸಲ್ಲಿಸಿದ್ದಾರೆ. ಜೊತೆಗೆ ಜಾನಪದ ಕಲಾ ತಂಡಗಳು ಸಹ ಭಾಗಿದ್ದವು. ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಹುಲ್ಲಹಳ್ಳಿ ಶ್ರೀನಿವಾಸ್, ಕಾಂಗ್ರೆಸ್ನಿಂದ ಹಾಲಿ ಶಾಸಕ ಬಿ. ಶಿವಣ್ಣ ಮತ್ತು ಜೆಡಿಎಸ್ನಿಂದ ಕೆ.ಪಿ ರಾಜು ಅಭ್ಯರ್ಥಿಗಳಾಗಿ ಕಣ್ಣಕ್ಕಿಳಿದದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos