Assembly Polls: ಇವತ್ತು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಎರಡು ದಿನ ವಿಳಂಬಗೊಳ್ಳಲಿದೆ: ಡಿಕೆ ಶಿವಕುಮಾರ್

Assembly Polls: ಇವತ್ತು ಬಿಡುಗಡೆಯಾಗಬೇಕಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಎರಡು ದಿನ ವಿಳಂಬಗೊಳ್ಳಲಿದೆ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 22, 2023 | 1:10 PM

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಬ್ಬಕ್ಕೆ ಬೆಂಗಳೂರಿಗೆ ಬಂದಿದ್ದಾರೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ ಸಹ ಇಲ್ಲೇ ಇದ್ದಾರೆ, ಇನ್ನೆರಡು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗುತ್ತದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಹೇಳುವ ಪ್ರಕಾರ ಪಟ್ಟಿ ಇನ್ನೆರಡು ದಿನ ವಿಳಂಬಗೊಳ್ಳಲಿದೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಬ್ಬಕ್ಕೆ ಅಂತ ಬೆಂಗಳೂರಿಗೆ ಬಂದಿದ್ದಾರೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ (KC Venugopal) ಸಹ ಇಲ್ಲೇ ಇದ್ದಾರೆ, ಇನ್ನೆರಡು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 22, 2023 01:10 PM