AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ

ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ

ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ವಿವೇಕ ಬಿರಾದಾರ|

Updated on:Aug 15, 2025 | 7:13 PM

Share

ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಯಾಗಿದ್ದ ಡಾ. ಶ್ರೀ ಶರಣಬಸವಪ್ಪ ಅಪ್ಪ ಅವರು ಗುರುವಾರ ನಿಧನರಾದರು. ಡಾ. ಶ್ರೀ ಶರಣಬಸವಪ್ಪ ಅಪ್ಪ ಅವರು ಅವರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದರು. ಶರಣಬಸವೇಶ್ವರ ಮಠದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಿತು. ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಕಲಬುರಗಿ, ಆಗಸ್ಟ್ 15: ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶ್ರೀ ಶರಣಬಸವಪ್ಪ ಅಪ್ಪ (92) ಅವರು ಗುರುವಾರ ರಾತ್ರಿ ಲಿಂಗೈಕ್ಯರಾದರು. ಶ್ರೀ ಶರಣಬಸಪ್ಪ ಅಪ್ಪ ಅವರ ಅಂತ್ಯಕ್ರಿಯೆ ಸಂಜೆ 5 ಗಂಟೆಗೆ ಶರಣಬಸವೇಶ್ವರ ಮಠದ ಆವರಣದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಧಿ ವಿಧಾನಗಳನುಸಾರ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಕ್ರಿಯಾಸಮಾಧಿ ಮಾಡಲಾಯಿತು. ಸೋಮನಾಥ ಶಾಸ್ತ್ರಿಯವರು ಪಂಚಾಚಾರ್ಯರ ಕಳಸ ಸ್ಥಾಪಿಸಿ ಸ್ವಸ್ತಿ ಪುಣ್ಯ ವಾಚಿಸಿದರು. ಡಾ. ಶ್ರೀ ಶರಣಬಸವಪ್ಪ ಅಪ್ಪ ಅವರ ಅಂತ್ಯಕ್ರಿಯೆಯಲ್ಲಿ ಸಚಿವರಾದ ಶರಣ ಪ್ರಕಾಶ ಪಾಟೀಲ್, ಈಶ್ವರ ಖಂಡ್ರೆ, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ಕೆಕೆಆರ್​ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಭಾಗಿಯಾಗಿದ್ದರು.

Published on: Aug 15, 2025 07:12 PM