ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆದರೆ ರಾಜ್ಯಪಾಲರು ಮುಖಭಂಗದಿಂದ ತಪ್ಪಿಸಿಕೊಳ್ಳಬಹುದು: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Aug 22, 2024 | 8:11 PM

ನಾವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ ಎಂದು ಶಿವಕುಮಾರ್ ಹೇಳುತ್ತಿದ್ದರೆ ಸಿದ್ದರಾಮಯ್ಯ ಅಭಿಮಾನದಿಂದ ತಮ್ಮ ಡೆಪ್ಯೂಟಿಯ ಮುಖ ನೋಡುತ್ತಿದ್ದರು. ಅವರಿಬ್ಬರ ನಡುವಿನ ಕೆಮಿಸ್ಟ್ರಿ ಈಗ ಬದಲಾಗಿದೆ, ಶಿವಕುಮಾರ್ ತಮ್ಮ ಪ್ರತಿ ಹೇಳಿಕೆಯಲ್ಲಿ ಮುಖ್ಯಮಂತ್ರಿಯವರನ್ನು ವಹಿಸಿಕೊಂಡು ಮಾತಾಡುತ್ತಿದ್ದಾರೆ.

ಬೆಂಗಳೂರು: ವಿಧಾನಸೌಧದಲ್ಲಿ ಸಿಎಲ್ ಪಿ ಮೀಟಿಂಗ್ ಮುಗಿದ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದರಾದರೂ ಹಲವಾರು ಸಚಿವರು, ಹಿರಿಯ ಶಾಸಕರು ಅದರಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ವಿವರಣೆ ನೀಡಿದ ಶಿವಕುಮಾರ್ ಘನವೆತ್ತ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಸರ್ಕಾರ ಬೀದಿಗಳಲ್ಲಿ ಹೋರಾಟ ನಡೆಸುತ್ತಿದೆ ಮತ್ತು ಕಾನೂನಾತ್ಮಕ ಹೋರಾಟವನ್ನೂ ಕೈಗೊಂಡಿದೆ. ಪಕ್ಷದ ಹಿರಿಯ ಶಾಸಕರಾಗಿರುವ ಆರ್ ವಿ ದೇಶಪಾಂಡೆ ಅವರು ರಾಜ್ಯಪಾಲರ ಕ್ರಮವನ್ನು ಖಂಡಿಸಿ ಪ್ರಸ್ತಾವನೆಯೊಂದನ್ನು ಸಭೆಯಲ್ಲಿ ಮಂಡಿಸಿದಾಗ ಮತ್ತೊಬ್ಬ ಹಿರಿಯ ಶಾಸಕ ತನ್ವೀರ್ ಸೇಠ್ ಅದನ್ನು ಅನುಮೋದಿಸಿದರು ಎಂದು ಶಿವಕುಮಾರ್ ಹೇಳಿದರು. ರಾಜ್ಯಪಾಲರಿಗೆ ಈಗಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ, ಅವರು ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿಯನ್ನು ವಾಪಸ್ಸು ತೆಗೆದುಕೊಂಡರೆ ಮುಖಭಂಗವಾಗೋದು ತಪ್ಪುತ್ತದೆ ಮತ್ತು ಸಂವಿಧಾನಕ್ಕೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಶಿವಕುಮಾರ್ ಹೇಳಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಎ ಪ್ರಕರಣ: ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳ ಎದುರು ಹಾಜರಾದ ಡಿಕೆ ಶಿವಕುಮಾರ್

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.