ರಾಜ್ಯಪಾಲರು ಸಂವಿಧಾನದ ಬದಲು ಬಿಜೆಪಿಗೆ ನಿಷ್ಠೆ ತೋರುತ್ತಿದ್ದಾರೆ: ಕೃಷ್ಣ ಭೈರೇಗೌಡ, ಸಚಿವ
ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುತ್ತಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭರ್ಜರಿ ಜನಮತದೊಂದಿಗೆ ಚುನಾಯಿತ ಸರ್ಕಾರವನ್ನು ಬುಡಮೇಲು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ, ರಾಜ್ಯಪಾಲರು ಅವರೊಂದಿಗೆ ಸೇರಿರುವುದು ದುರಂತ ಎಂದು ಕೃಷ್ಣ ಭೈರೇಗೌಡ ಹೇಳಿದರು.
ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯಪಾಲರ ಕ್ರಮದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯ ಸಮಯದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ರಾಜ್ಯಪಾಲರು ಸಂವಿಧಾನಕ್ಕೆ ನಿಷ್ಠೆರಾಗಿರುವ ಬದಲು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದರು. ದಾರಿಹೋಕನೊಬ್ಬ ನೀಡುವ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರೆ ಅದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ನೀಡಿದ ವರದಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ಭೈರೇಗೌಡ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ರಾಜ್ಯಪಾಲರಿಗೆ ನಿಂದನೆ ಆರೋಪ: ಜಮೀರ್, ಕೃಷ್ಣ ಭೈರೇಗೌಡ ಸೇರಿ ಕಾಂಗ್ರೆಸ್ ನಾಯಕರ ವಿರುದ್ದ ಬಿಜೆಪಿ ದೂರು