Who would be CM? ಮುಖ್ಯಮಂತ್ರಿ ಯಾರೆನ್ನುವ ಗೊಂದಲ ಹೈಕಮಾಂಡ್ ಸುಲಭವಾಗಿ ಬಗೆಹರಿಸಲಿದೆ: ಜಿ ಪರಮೇಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: May 16, 2023 | 12:17 PM

ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೆ, ಎಷ್ಟು ಜನ ಉಪಮುಖ್ಯಮಂತ್ರಿಗಳನ್ನು ಮಾಡುತ್ತಾರೆ ಅಂತ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದರು.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ನಡುವೆ ಪೈಪೋಟಿ ಇರೋದು ನಿಜ ಅದರೆ ಅತಿರೇಕಕ್ಕೆ ಹೋಗಲಾರದು; ಯಾಕೆಂದರೆ, ಕಠಿಣ ಪರಿಶ್ರಮದ ನಂತರ ರಾಜ್ಯದಲ್ಲಿ ಜನಾದೇಶ ಕಾಂಗ್ರೆಸ್ ಗೆ ಸಿಕ್ಕಿದೆ. ಹೈಕಮಾಂಡ್ ಗೆ ಈ ಸಂಗತಿಯ ಅರಿವಿದೆ. ಹಾಗಾಗಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾರ್ಯದರ್ಶಿಗಳು ಯಾವುದೇ ಸಮಸ್ಯೆ ಇಲ್ಲದೆ ಈ ಗೊಂದಲ ಬಗೆಹರಿಸುತ್ತಾರೆ ಎಂದು ಕೊರಟಗೆರೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಡಾ ಜಿ ಪರಮೇಶ್ವರ (Dr G Parameshwar) ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪರಮೇಶ್ವರ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೆ, ಎಷ್ಟು ಜನ ಉಪಮುಖ್ಯಮಂತ್ರಿಗಳನ್ನು ಮಾಡುತ್ತಾರೆ ಅಂತ ತನಗೆ ಗೊತ್ತಿಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.