6,6,6,6,4,4,4,4: ಅಬ್ಬರಿಸಿದ ಹೆನ್ರಿಕ್ ಕ್ಲಾಸೆನ್
Heinrich Klaasen: ಈ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಅಂತಿಮ ಎಸೆತಗಳ ವೇಳೆ ಅಬ್ಬರಿಸಿದ ಕ್ಲಾಸೆನ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಕೇವಲ 25 ಎಸೆತಗಳಲ್ಲಿ 50 ರನ್ ಸಿಡಿಸಿದರು. ಹೆನ್ರಿಕ್ ಕ್ಲಾಸೆನ್ ಅವರ ಈ ಭರ್ಜರಿ ಅರ್ಧಶತಕದ ನೆರವಿನಿಂದ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 171 ರನ್ ಕಲೆಹಾಕಿತು.
ದಿ ಹಂಡ್ರೆಡ್ ಲೀಗ್ನ 17ನೇ ಪಂದ್ಯದ ಮೂಲಕ ಹೆನ್ರಿಕ್ ಕ್ಲಾಸೆನ್ ತಮ್ಮ ಹಳೆಯ ಫಾರ್ಮ್ ಕಂಡುಕೊಂಡಿದ್ದಾರೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಚೆಂಸ್ಟರ್ ಒರಿಜಿನಲ್ಸ್ ಹಾಗೂ ನಾದರ್ನ್ ಸೂಪರ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋಸ್ ಬಟ್ಲರ್ 45 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ಗಳೊಂದಿಗೆ 64 ರನ್ ಬಾರಿಸಿದರು.
ಮತ್ತೊಂದೆಡೆ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಅಂತಿಮ ಎಸೆತಗಳ ವೇಳೆ ಅಬ್ಬರಿಸಿದ ಕ್ಲಾಸೆನ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಕೇವಲ 25 ಎಸೆತಗಳಲ್ಲಿ 50 ರನ್ ಸಿಡಿಸಿದರು. ಹೆನ್ರಿಕ್ ಕ್ಲಾಸೆನ್ ಅವರ ಈ ಭರ್ಜರಿ ಅರ್ಧಶತಕದ ನೆರವಿನಿಂದ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 171 ರನ್ ಕಲೆಹಾಕಿತು.
172 ರನ್ಗಳ ಗುರಿ ಬೆನ್ನತ್ತಿದ ನಾದರ್ನ್ ಸೂಪರ್ ಚಾರ್ಜರ್ಸ್ ತಂಡವು 87 ಎಸೆತಗಳಲ್ಲಿ 114 ರನ್ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು 57 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

