6,6,6,6,4,4,4,4: ಅಬ್ಬರಿಸಿದ ಹೆನ್ರಿಕ್ ಕ್ಲಾಸೆನ್

Updated on: Aug 18, 2025 | 11:54 AM

Heinrich Klaasen: ಈ ಪಂದ್ಯದಲ್ಲಿ ಹೆನ್ರಿಕ್ ಕ್ಲಾಸೆನ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಅಂತಿಮ ಎಸೆತಗಳ ವೇಳೆ ಅಬ್ಬರಿಸಿದ ಕ್ಲಾಸೆನ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಕೇವಲ 25 ಎಸೆತಗಳಲ್ಲಿ 50 ರನ್​ ಸಿಡಿಸಿದರು. ಹೆನ್ರಿಕ್ ಕ್ಲಾಸೆನ್ ಅವರ  ಈ ಭರ್ಜರಿ ಅರ್ಧಶತಕದ ನೆರವಿನಿಂದ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 171 ರನ್ ಕಲೆಹಾಕಿತು.

ದಿ ಹಂಡ್ರೆಡ್ ಲೀಗ್​ನ 17ನೇ ಪಂದ್ಯದ ಮೂಲಕ ಹೆನ್ರಿಕ್ ಕ್ಲಾಸೆನ್ ತಮ್ಮ ಹಳೆಯ ಫಾರ್ಮ್ ಕಂಡುಕೊಂಡಿದ್ದಾರೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮ್ಯಾಚೆಂಸ್ಟರ್ ಒರಿಜಿನಲ್ಸ್ ಹಾಗೂ ನಾದರ್ನ್ ಸೂಪರ್ ಚಾರ್ಜರ್ಸ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋಸ್ ಬಟ್ಲರ್ 45 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್​ಗಳೊಂದಿಗೆ 64 ರನ್ ಬಾರಿಸಿದರು.

ಮತ್ತೊಂದೆಡೆ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅದರಲ್ಲೂ ಅಂತಿಮ ಎಸೆತಗಳ ವೇಳೆ ಅಬ್ಬರಿಸಿದ ಕ್ಲಾಸೆನ್ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಕೇವಲ 25 ಎಸೆತಗಳಲ್ಲಿ 50 ರನ್​ ಸಿಡಿಸಿದರು. ಹೆನ್ರಿಕ್ ಕ್ಲಾಸೆನ್ ಅವರ  ಈ ಭರ್ಜರಿ ಅರ್ಧಶತಕದ ನೆರವಿನಿಂದ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 171 ರನ್ ಕಲೆಹಾಕಿತು.

172 ರನ್​ಗಳ ಗುರಿ ಬೆನ್ನತ್ತಿದ ನಾದರ್ನ್ ಸೂಪರ್ ಚಾರ್ಜರ್ಸ್ ತಂಡವು 87 ಎಸೆತಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡವು 57 ರನ್​ಗಳ ಭರ್ಜರಿ ಜಯ ಸಾಧಿಸಿದೆ.