ವಿಲ್ ಜ್ಯಾಕ್ಸ್ ಬಿರುಗಾಳಿ ಬ್ಯಾಟಿಂಗ್: 57 ಎಸೆತಗಳಲ್ಲಿ ಮುಗಿದ ಪಂದ್ಯ
Oval Invincibles vs Manchester Originals: ತವಾಂಡಾ ಮುಯೆಯೆ 28 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಅಜೇಯ 59 ರನ್ ಬಾರಿಸಿದರು. ಈ ಮೂಲಕ ಓವಲ್ ಇನ್ವಿನ್ಸಿಬಲ್ಸ್ ತಂಡವು ಕೇವಲ 57 ಎಸೆತಗಳಲ್ಲಿ 129 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಓವಲ್ ಇನ್ವಿನ್ಸಿಬಲ್ಸ್ ತಂಡವು 8 ಪಾಯಿಂಟ್ಸ್ನೊಂದಿಗೆ ದಿ ಹಂಡ್ರೆಡ್ ಲೀಗ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನಲ್ಲಿ ವಿಲ್ ಜ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಓವಲ್ ಇನ್ವಿನ್ಸಿಬಲ್ಸ್ ಮತ್ತು ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 128 ರನ್ಗಳಿಸಿ ಆಲೌಟ್ ಆಯಿತು.
129 ರನ್ಗಳ ಗುರಿ ಬೆನ್ನತ್ತಿದ ಓವಲ್ ಇನ್ವಿನ್ಸಿಬಲ್ಸ್ ಪರ ವಿಲ್ ಜ್ಯಾಕ್ಸ್ ಹಾಗೂ ತವಾಂಡಾ ಮುಯೆಯೆ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ಗೆ ಒತ್ತು ನೀಡಿದ ವಿಲ್ ಜ್ಯಾಕ್ಸ್ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 26 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 61 ರನ್ ಬಾರಿಸಿ ಔಟಾದರು.
ಮತ್ತೊಂದೆಡೆ ತವಾಂಡಾ ಮುಯೆಯೆ 28 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ ಅಜೇಯ 59 ರನ್ ಬಾರಿಸಿದರು. ಈ ಮೂಲಕ ಓವಲ್ ಇನ್ವಿನ್ಸಿಬಲ್ಸ್ ತಂಡವು ಕೇವಲ 57 ಎಸೆತಗಳಲ್ಲಿ 129 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಓವಲ್ ಇನ್ವಿನ್ಸಿಬಲ್ಸ್ ತಂಡವು 8 ಪಾಯಿಂಟ್ಸ್ನೊಂದಿಗೆ ದಿ ಹಂಡ್ರೆಡ್ ಲೀಗ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

