AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರ್ನರ್ ಅಬ್ಬರ... ಬೈರ್​ಸ್ಟೋವ್ ಸಿಡಿಲಬ್ಬರ... ಕೊನೆಗೂ ಗೆದ್ದ ವಿಲಿಯಮ್ಸನ್ ಪಡೆ

ವಾರ್ನರ್ ಅಬ್ಬರ… ಬೈರ್​ಸ್ಟೋವ್ ಸಿಡಿಲಬ್ಬರ… ಕೊನೆಗೂ ಗೆದ್ದ ವಿಲಿಯಮ್ಸನ್ ಪಡೆ

ಝಾಹಿರ್ ಯೂಸುಫ್
|

Updated on: Aug 10, 2025 | 7:28 AM

Share

The Hundred: ಜಾನಿ ಬೈರ್​ಸ್ಟೋವ್ ಬ್ಯಾಟ್​ನಿಂದ 50 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 86 ರನ್​ಗಳು ಮೂಡಿಬಂತು. ಆದರೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ಸಿಗದ ಕಾರಣ ವೆಲ್ಷ್ ಫೈರ್ ತಂಡವು 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 155 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೇನ್ ವಿಲಿಯಮ್ಸನ್ ನಾಯಕತ್ವದ ಲಂಡನ್ ಸ್ಪಿರಿಟ್ ತಂಡವು 8 ರನ್​ಗಳ ರೋಚಕ ಜಯ ಸಾಧಿಸಿತು.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ 6ನೇ ಪಂದ್ಯವು ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು. ಕಾರ್ಡಿಫ್​ನ ಸೋಫಿಯಾ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ವೆಲ್ಷ್ ಫೈರ್ ಹಾಗೂ ಲಂಡನ್ ಸ್ಪಿರಿಟ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ವೆಲ್ಷ್ ಫೈರ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಲಂಡನ್ ಸ್ಪಿರಿಟ್ ತಂಡಕ್ಕೆ ಅನುಭವಿ ಆರಂಭಿಕ ದಾಂಡಿಗ ಡೇವಿಡ್ ವಾರ್ನರ್ ಸ್ಫೋಟಕ ಆರಂಭ ಒದಗಿಸಿದ್ದರು. ಕಳೆದ ಕೆಲ ಪಂದ್ಯಗಳಿಂದ ಕಳಪೆ ಫಾರ್ಮ್​ನಿಂದ ಬಳಲುತ್ತಿದ್ದ ವಾರ್ನರ್ ಈ ಬಾರಿ ಭರ್ಜರಿ ಬ್ಯಾಟಿಂಗ್​ ಮೂಲಕ ಗಮನ ಸೆಳೆದರು.

45 ಎಸೆತಗಳನ್ನು ಎದುರಿಸಿದ ಡೇವಿಡ್ ವಾರ್ನರ್ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 70 ರನ್ ಬಾರಿಸಿದರು. ಈ ಭರ್ಜರಿ ಅರ್ಧಶತಕದ ನೆರವಿನೊಂದಿಗೆ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 163 ರನ್​ ಕಲೆಹಾಕಿತು.

ಈ ಕಠಿಣ ಗುರಿಯನ್ನು ಬೆನ್ನತ್ತಿದ ವೆಲ್ಷ್ ಫೈರ್ ತಂಡಕ್ಕೆ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಜಾನಿ ಬೈರ್​ಸ್ಟೋವ್ ವಿಸ್ಫೋಟಕ ಆರಂಭ ಒದಗಿಸಿದರು. ಮೊದಲ ಓವರ್​​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ್ದ ಜಾನಿ ಲಂಡನ್​ ಸ್ಪಿರಿಟ್ ಬೌಲರ್​ಗಳ ಬೆಂಡೆತ್ತಿದರು. 

ಪರಿಣಾಮ ಜಾನಿ ಬೈರ್​ಸ್ಟೋವ್ ಬ್ಯಾಟ್​ನಿಂದ 50 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 86 ರನ್​ಗಳು ಮೂಡಿಬಂತು. ಆದರೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್ ಸಿಗದ ಕಾರಣ ವೆಲ್ಷ್ ಫೈರ್ ತಂಡವು 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 155 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಕೇನ್ ವಿಲಿಯಮ್ಸನ್ ನಾಯಕತ್ವದ ಲಂಡನ್ ಸ್ಪಿರಿಟ್ ತಂಡವು 8 ರನ್​ಗಳ ರೋಚಕ ಜಯ ಸಾಧಿಸಿತು.