AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರಿಸಿದ ಡೇವಿಡ್ ವಾರ್ನರ್... ಆದರೂ ಸೋತರು..!

ಅಬ್ಬರಿಸಿದ ಡೇವಿಡ್ ವಾರ್ನರ್… ಆದರೂ ಸೋತರು..!

ಝಾಹಿರ್ ಯೂಸುಫ್
|

Updated on: Aug 12, 2025 | 10:08 AM

Share

Manchester Originals vs London Spirit: 164 ರನ್​ಗಳ ಗುರಿ ಬೆನ್ನತ್ತಿದ ಲಂಡನ್ ಸ್ಪಿರಿಟ್ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಾರ್ನರ್ ಮೈದಾನದ ಮೂಲೆ ಮೂಲೆಗೂ ಫೋರ್​ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಈ ಮೂಲಕ 51 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 71 ರನ್ ಬಾರಿಸಿದರು.

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ 9ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ತಂಡದ ನಾಯಕ ಫಿಲ್ ಸಾಲ್ಟ್ ಬ್ಯಾಟಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಫಿಲ್ ಸಾಲ್ಟ್ 31 ರನ್ ಬಾರಿಸಿದರೆ, ಜೋಸ್ ಬಟ್ಲರ್ 46 ರನ್​ ಗಳಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ 24 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು.

164 ರನ್​ಗಳ ಗುರಿ ಬೆನ್ನತ್ತಿದ ಲಂಡನ್ ಸ್ಪಿರಿಟ್ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಾರ್ನರ್ ಮೈದಾನದ ಮೂಲೆ ಮೂಲೆಗೂ ಫೋರ್​ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಈ ಮೂಲಕ 51 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 71 ರನ್ ಬಾರಿಸಿದರು.

ಡೇವಿಡ್ ವಾರ್ನರ್ ಅವರ ಈ ಆಕರ್ಷಕದ ಅರ್ಧಶತಕದ ಹೊರತಾಗಿಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 6 ವಿಕೆಟ್​ ಕಳೆದುಕೊಂಡು 153 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 10 ರನ್​ಗಳ ರೋಚಕ ಜಯ ಸಾಧಿಸಿದೆ.