ಅಬ್ಬರಿಸಿದ ಡೇವಿಡ್ ವಾರ್ನರ್… ಆದರೂ ಸೋತರು..!
Manchester Originals vs London Spirit: 164 ರನ್ಗಳ ಗುರಿ ಬೆನ್ನತ್ತಿದ ಲಂಡನ್ ಸ್ಪಿರಿಟ್ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಾರ್ನರ್ ಮೈದಾನದ ಮೂಲೆ ಮೂಲೆಗೂ ಫೋರ್ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಈ ಮೂಲಕ 51 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 71 ರನ್ ಬಾರಿಸಿದರು.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನ 9ನೇ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ರೋಚಕ ಜಯ ಸಾಧಿಸಿದೆ. ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಲಂಡನ್ ಸ್ಪಿರಿಟ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ತಂಡದ ನಾಯಕ ಫಿಲ್ ಸಾಲ್ಟ್ ಬ್ಯಾಟಿಂಗ್ ಆಯ್ದುಕೊಂಡರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಫಿಲ್ ಸಾಲ್ಟ್ 31 ರನ್ ಬಾರಿಸಿದರೆ, ಜೋಸ್ ಬಟ್ಲರ್ 46 ರನ್ ಗಳಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ 24 ರನ್ಗಳ ಕೊಡುಗೆ ನೀಡಿದರು. ಈ ಮೂಲಕ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 163 ರನ್ ಕಲೆಹಾಕಿತು.
164 ರನ್ಗಳ ಗುರಿ ಬೆನ್ನತ್ತಿದ ಲಂಡನ್ ಸ್ಪಿರಿಟ್ ಪರ ಆರಂಭಿಕನಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ವಾರ್ನರ್ ಮೈದಾನದ ಮೂಲೆ ಮೂಲೆಗೂ ಫೋರ್ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಈ ಮೂಲಕ 51 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್ಗಳೊಂದಿಗೆ 71 ರನ್ ಬಾರಿಸಿದರು.
ಡೇವಿಡ್ ವಾರ್ನರ್ ಅವರ ಈ ಆಕರ್ಷಕದ ಅರ್ಧಶತಕದ ಹೊರತಾಗಿಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಲಂಡನ್ ಸ್ಪಿರಿಟ್ ತಂಡವು 100 ಎಸೆತಗಳಲ್ಲಿ 6 ವಿಕೆಟ್ ಕಳೆದುಕೊಂಡು 153 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 10 ರನ್ಗಳ ರೋಚಕ ಜಯ ಸಾಧಿಸಿದೆ.
