100 ಎಸೆತಗಳಲ್ಲಿ 109 ರನ್ ಗಳಿಸಿ ಸೋತ ಫಿಲ್ ಸಾಲ್ಟ್ ಪಡೆ
Manchester Originals vs Birmingham Phoenix: ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ 20 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 31 ರನ್ ಬಾರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ 35 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 34 ರನ್ಗಳು ಮಾತ್ರ.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನ 28ನೇ ಪಂದ್ಯದಲ್ಲಿ ಫಿಲ್ ಸಾಲ್ಟ್ ನೇತೃತ್ವದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಹೀನಾಯವಾಗಿ ಸೋತಿದೆ. ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆದ ಬರ್ಮಿಂಗ್ಹ್ಯಾಮ್ ಫಿನಿಕ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಮೊದಲು ಬ್ಯಾಟ್ ಮಾಡಿತು.
ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ 20 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 31 ರನ್ ಬಾರಿಸಿದರು. ಇನ್ನು ಹೆನ್ರಿಕ್ ಕ್ಲಾಸೆನ್ 35 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 34 ರನ್ಗಳು ಮಾತ್ರ. ಹಾಗೆಯೇ ಇತರೆ ಬ್ಯಾಟರ್ಗಳಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 7 ವಿಕೆಟ್ ಕಳೆದುಕೊಂಡು 109 ರನ್ಗಳಿಸಲಷ್ಟೇ ಶಕ್ತರಾದರು.
110 ರನ್ಗಳ ಸುಲಭ ಗುರಿ ಬೆನ್ನತ್ತಿದ ಬರ್ಮಿಂಗ್ಹ್ಯಾಮ್ ಫಿನಿಕ್ಸ್ ಬೆನ್ ಡಕೆಟ್ ಅಜೇಯ 49 ರನ್ ಬಾರಿಸಿದರೆ, ಜೋ ಕ್ಲಾರ್ಕ್ 21 ಎಸೆತಗಳಲ್ಲಿ 40 ರನ್ ಚಚ್ಚಿದರು. ಈ ಮೂಲಕ ಕೇವಲ 83 ಎಸೆತಗಳಲ್ಲಿ 113 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.

