AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!

The Hundred, Manchester Originals vs Southern Brave: ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಸೋಲನುಭವಿಸಿದೆ. ಮ್ಯಾಂಚೆಸ್ಟರ್ ಒರಿಜಿನಲ್ಸ್ ನೀಡಿದ 131 ರನ್​ಗಳ ಟಾರ್ಗೆಟ್​ ಬೆನ್ನತ್ತಿದ ಸದರ್ನ್ ಬ್ರೇವ್ ತಂಡವು 99 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ 1 ವಿಕೆಟ್​ನ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 07, 2025 | 12:54 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ ದ್ವಿತೀಯ ಪಂದ್ಯವು ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿತ್ತು. ಮ್ಯಾಂಚೆಸ್ಟರ್​ನ ಓಲ್ಡ್​​ ಟ್ರಾಫೋರ್ಡ್​ ಮೈದಾನದಲ್ಲಿ ನಡೆದ ಈ ಟೂರ್ನಿಯ ದ್ವಿತೀಯ ಪಂದ್ಯದಲ್ಲಿ ಸದರ್ನ್ ಬ್ರೇವ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಫಿಲ್ ಸಾಲ್ಟ್ (60) ಭರ್ಜರಿ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 4 ವಿಕೆಟ್ ಕಳೆದುಕೊಂಡು 131 ರನ್​ ಗಳಿಸಿದ್ದರು.

100 ಎಸೆತಗಳಲ್ಲಿ 132 ರನ್​ಗಳ ಗುರಿ ಪಡೆದ ಸದರ್ನ್ ಬ್ರೇವ್ ತಂಡಕ್ಕೆ ಡು ಪ್ಲೂಯ್ (25) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಜೇಸನ್ ರಾಯ್ 30 ರನ್​ಗಳ ಕೊಡುಗೆ ನೀಡಿದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಸದರ್ನ್ ಬ್ರೇವ್ ತಂಡಕ್ಕೆ ಕೊನೆಯ ಮೂರು ಎಸೆತಗಳಲ್ಲಿ 3 ರನ್​ಗಳು ಬೇಕಿದ್ದವು.

ಅತ್ತ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡಕ್ಕೆ ಗೆಲ್ಲಲು ಕೇವಲ 2 ವಿಕೆಟ್​ಗಳ ಅಗತ್ಯವಿತ್ತು. ಇದೇ ವೇಳೆ ಗ್ರೆಗೊರಿ ಎಸೆದ ಎಸೆತದಲ್ಲಿ ಟೈಮಲ್ ಮಿಲ್ಸ್ ಬೌಲ್ಡ್ ಆದರು. ಪರಿಣಾಮ ಕೊನೆಯ 2 ಎಸೆತಗಳಲ್ಲಿ 3 ರನ್​ಗಳು ಬೇಕಿದ್ದವು. ಅಂತಿಮ ದಾಂಡಿಗನಾಗಿ ಕ್ರೀಸ್​ಗೆ ಬಂದ ರೀಸ್ ಟೋಪ್ಲಿ ಫೋರ್ ಬಾರಿಸುವ ಮೂಲಕ ಸದರ್ನ್​ ಬ್ರೇವ್ ತಂಡಕ್ಕೆ 1 ವಿಕೆಟ್​ನ ರೋಚಕ ತಂದುಕೊಟ್ಟರು. ಇದೀಗ ಈ ರಣರೋಚಕ ಪಂದ್ಯದ ವಿಡಿಯೋ ವೈರಲ್ ಆಗಿದೆ.

Follow Us
ವಿಚಿತ್ರ ಮನೆ: 3x7 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3x7 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ