ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ

Edited By:

Updated on: Mar 06, 2026 | 9:42 AM

‘ದಿ ಕೇರಳ ಸ್ಟೋರಿ 2’ ಸಿನಿಮಾ ಉಚಿತ ಪ್ರದರ್ಶನ ಮಾಡಲಾಗಿದೆ. ಮಂಗಳೂರಿನಲ್ಲಿ ಈ ಕೆಲಸ ನಡೆದಿದೆ. ಸೀತಾ ಪರಿವಾರ್ ಅವರ ಕಡೆಯಿಂದ ಈ ಕೆಲಸ ಆಗಿದೆ. ಈ ರೀತಿಯಲ್ಲಿ ಸಿನಿಮಾ ತೋರಿಸಲು ಸಾಕಷ್ಟು ಬೆದರಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಲವ್​ ಜಿಹಾದ್ ಕುರಿತಂತೆ ಬಂದಿರೋ ‘ದಿ ಕೇರಳ ಸ್ಟೋರಿ 2’ ಸಿನಿಮಾ ಚರ್ಚೆ ಹುಟ್ಟುಹಾಕಿದೆ. ಪುತ್ತೂರಿನ GL ONE ಮಾಲ್ ಅಲ್ಲಿ 16 ವರ್ಷದಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಈ ಚಿತ್ರವನ್ನು ಉಚಿತ ಪ್ರದರ್ಶನ ಮಾಡಲಾಗಿದೆ. ಸೀತಾ ಪರಿವಾರ್ ಸಂಘಟನೆಯ ಕಡೆಯಿಂದ ಈ ಕೆಲಸ ಆಗಿದೆ. ಇದಕ್ಕೆ ಬಿಜೆಪಿ-ಹಿಂದು ಮುಖಂಡರು ಸಾಥ್ ಕೊಟ್ಟಿದ್ದಾರೆ. ಇದಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 06, 2026 09:41 AM
Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More