KCL 2025: ನಾಕೌಟ್ ಹಂತಕ್ಕೇರಿದ ಸ್ಯಾಮ್ಸನ್ ಪಡೆ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಲಂ ಸೈಲರ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 130 ರನ್ ಕಲೆಹಾಕಿದ್ದರು. ಈ ಸುಲಭ ಗುರಿ ಬೆನ್ನತ್ತಿದ ಕೊಚ್ಚಿ ಬ್ಲೂ ಟೈಗರ್ಸ್ ತಂಡವು 17.1 ಓವರ್ಗಳಲ್ಲಿ 131 ರನ್ ಬಾರಿಸಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕೊಚ್ಚಿ ಬ್ಲೂ ಟೈಗರ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿದೆ.
ಕೇರಳ ಪ್ರೀಮಿಯರ್ ಲೀಗ್ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಕೊಚ್ಚಿ ಬ್ಲೂ ಟೈಗರ್ಸ್ ತಂಡವು ಇದೀಗ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿದೆ. ಆಡಿರುವ 10 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿ 16 ಅಂಕಗಳೊಂದಿಗೆ ನಾಕೌಟ್ ಹಂತಕ್ಕೇರಿದೆ. ತಿರುವನಂತಪುರಂ ರಾಯಲ್ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿದ ಕೊಚ್ಚಿ ಬ್ಲೂ ಟೈಗರ್ಸ್, ಆ ಬಳಿಕ ಆಲಪ್ಪಿ ರಿಪ್ಪಲ್ಸ್ ತಂಡವನ್ನು 34 ರನ್ಗಳಿಂದ ಮಣಿಸಿತ್ತು.
ಇದಾದ ಬಳಿಕ ಕೊಲ್ಲಂ ಸೈಲರ್ಸ್ ತಂಡದ ವಿರುದ್ಧ 4 ವಿಕೆಟ್ಗಳ ಜಯ ಸಾಧಿಸಿದ್ದರು. ಆದರೆ ನಾಲ್ಕನೇ ಪಂದ್ಯದಲ್ಲಿ ತ್ರಿಶೂರ್ ಟೈಟಾನ್ಸ್ ವಿರುದ್ಧ 5 ವಿಕೆಟ್ಗಳ ಸೋಲನುಭವಿಸಬೇಕಾಯಿತು. ಇದರ ಬೆನ್ನಲ್ಲೇ ಕ್ಯಾಲಿಕಪ್ ಗ್ಲೋಬ್ಸ್ಟಾರ್ಸ್ ಕೂಡ ಕೊಚ್ಚಿ ಬ್ಲೂ ಟೈಗರ್ಸ್ ತಂಡಕ್ಕೆ 33 ರನ್ಗಳ ಸೋಲುಣಿಸಿದ್ದರು.
ಈ ಎರಡು ಸೋಲುಗಳ ಬಳಿಕ ಮತ್ತೆ ಗೆಲುವಿನ ಲಯಕ್ಕೆ ಮರಳಿದ ಸ್ಯಾಲಿ ಸ್ಯಾಮ್ಸನ್ ಪಡೆ ಬ್ಯಾಕ್ ಟು ಬ್ಯಾಕ್ 3 ಗೆಲುವು ದಾಖಲಿಸಿದ್ದರು. ಇದೀಗ ಕೊನೆಯ ಲೀಗ್ ಪಂದ್ಯದಲ್ಲಿ ಕೊಲ್ಲಂ ಸೈಲರ್ಸ್ ತಂಡವನ್ನು 6 ವಿಕೆಟ್ಗಳಿಂದ ಮಣಿಸಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೊಲ್ಲಂ ಸೈಲರ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 130 ರನ್ ಕಲೆಹಾಕಿದ್ದರು. ಈ ಸುಲಭ ಗುರಿ ಬೆನ್ನತ್ತಿದ ಕೊಚ್ಚಿ ಬ್ಲೂ ಟೈಗರ್ಸ್ ತಂಡವು 17.1 ಓವರ್ಗಳಲ್ಲಿ 131 ರನ್ ಬಾರಿಸಿ 6 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಕೊಚ್ಚಿ ಬ್ಲೂ ಟೈಗರ್ಸ್ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಸೆಮಿಫೈನಲ್ಗೆ ಎಂಟ್ರಿ ಕೊಟ್ಟಿದೆ.
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ