ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಬಿಬಿಎಂಪಿ ಕಸದ ಆಟೋ ಚಾಲಕನ ಮೇಲೆ ಮನಸೋ ಇಚ್ಚೆ ಥಳಿಸಿ ಹಲ್ಲೆ
ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಬಿಳುತ್ತಿಲ್ಲ. ಅದರಂತೆ ಇದೀಗ ಬೆಂಗಳೂರಿನ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಹಾಡಹಗಲೇ ಬಿಬಿಎಂಪಿ ಕಸದ ಆಟೋ ಚಾಲಕ ಸತೀಶ್ ಎಂಬಾತನನ್ನ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಬಿಳುತ್ತಿಲ್ಲ. ಅದರಂತೆ ಇದೀಗ ಬೆಂಗಳೂರಿನ ಕಾಟನ್ ಪೇಟೆ (Cotton Pete)ಯ ಜಾಲಿ ಮೊಹಲ್ಲಾದಲ್ಲಿ ಹಾಡಹಗಲೇ ಬಿಬಿಎಂಪಿ ಕಸದ ಆಟೋ ಚಾಲಕ ಸತೀಶ್ ಎಂಬಾತನನ್ನ ಅಡ್ಡಗಟ್ಟಿ ಅಟ್ಯಾಕ್ ಮಾಡಿದ್ದಾರೆ. ಆತನನ್ನ ದೊಣ್ಣೆ, ಬ್ಯಾಟ್ನಿಂದ ಮನಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಕಿಡಿಗೇಡಿಗಳ ಹಲ್ಲೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೆಲಸ ಮುಗಿಸಿ 11 ಗಂಟೆ ಸುಮಾರಿಗೆ ಮನೆಗೆ ಹೊರಟಿದ್ದ ಚಾಲಕ ಸತೀಶ್ನನ್ನ ಜಾಲಿ ಮೊಹಲ್ಲಾ ರಸ್ತೆಯಲ್ಲಿ ಅಡ್ಡಗಟ್ಟಿ ಏಕಾಏಕಿ ರಾಜೇಂದ್ರ, ಮನು ಮತ್ತು ಆವರ ಗ್ಯಾಂಗ್ನಿಂದ ಅಟ್ಯಾಕ್ ಮಾಡಿದೆ. ಕೂದಲೆಳೆ ಅಂತರದಲ್ಲಿ ಚಾಲಕ ಸತೀಶ್ ಹಲ್ಲೆಕೋರರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಇದೀಗ ಆಟೋ ಚಾಲಕ ಸತೀಶ್ಗೆ ಗಂಭೀರ ಗಾಯಗಳಾಗಿದ್ದು, ಹಲ್ಲೆ ನಡೆಸಿದ ರಾಜೇಂದ್ರ, ಮನು ಮತ್ತು ಗ್ಯಾಂಗ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!

ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ

ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್ಕೆ ಪಾಟೀಲ್
