ಸೋರುತಿಹುದು ಬಸ್ ಮಾಳಿಗಿ: ವಾಯುವ್ಯ ಸಾರಿಗೆ ಬಸ್ ಚಾಲಕರಿಗೆ ಛತ್ರಿ ಗ್ಯಾರಂಟಿ! ವಿಡಿಯೋ ನೋಡಿ

ಸೋರುತಿಹುದು ಬಸ್ ಮಾಳಿಗಿ: ವಾಯುವ್ಯ ಸಾರಿಗೆ ಬಸ್ ಚಾಲಕರಿಗೆ ಛತ್ರಿ ಗ್ಯಾರಂಟಿ! ವಿಡಿಯೋ ನೋಡಿ

Kiran HV
| Updated By: Ganapathi Sharma

Updated on:May 24, 2024 | 2:00 PM

ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದೆ. ಸಾರಿಗೆ ಇಲಾಖೆಯ ಡಕೋಟ ಬಸ್​​​ಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಸಾರ್ವಜನಿಕರು, ಪ್ರಯಾಣಿಕರ ಪ್ರಾಣದ ಜತೆ ಚೆಲ್ಲಾಟವಾಡಬೇಡಿ ಎಂದು ಕಿಡಿ ಕಾರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಬೆಂಗಳೂರು, ಮೇ 24: ಸರ್ಕಾರಿ ಸಾರಿಗೆ ಸಂಸ್ಥೆಯ ಬಸ್ (KSRTC Bus) ​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿಯನ್ನೇನೋ ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ನೀಡಿದೆ. ಆದರ ಜತೆಗೆ, ಚಾಲಕರಿಗೆ ಛತ್ರಿ ಗ್ಯಾರಂಟಿಯನ್ನೂ ನೀಡಿದೆಯೇ! ಹೀಗೊಂದು ಪ್ರಶ್ನೆಯನ್ನು ಸಾರ್ವಜನಿಕರು ಸಾಮಾಜಿಕ ಮಾಧ್ಯಮಗಳಲ್ಲಿ ಕೇಳುತ್ತಿದ್ದಾರೆ. ಇದಕ್ಕೆ ಕಾರಣ ಬಸ್​​ಗಳಲ್ಲಿ ಮಳೆ ನೀರು ಸೋರುತ್ತಿರುವುದು. ಸಾರಿಗೆ ಸಂಸ್ಥೆಯ ಕೆಲವು ಬಸ್​​ಗಳಲ್ಲಿ ಅವ್ಯವಸ್ಥೆ ಎದ್ದು ಕಾಣಿಸುತ್ತಿದೆ. ವಾಯವ್ಯ ಕರ್ನಾಟಕ ಸಾರಿಗೆ (NWKRTC Bus) ಬಸ್ಸೊಂದರಲ್ಲಿ ಸೋರುತ್ತಿರುವ ಮಳೆನೀರಿನಿಂದ ರಕ್ಷಣೆ ಪಡೆಯಲು ಚಾಲಕರೊಬ್ಬರು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಲಾಯಿಸಿದ ಘಟನೆ ವರದಿಯಾಗಿದೆ. ಘಟನೆಯ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಒಂದು ಕಡೆ ಡಕೋಟ ಬಸ್ ಸರ್ವಿಸ್, ಮತ್ತೊಂದು ಕಡೆ ಮಳೆಗೆ ಛಾವಣಿ ಸೋರುವ ಬಸ್, ಛೇ, ಇದೆಂಥಾ ಅವ್ಯವಸ್ಥೆ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್

ಚಾಲಕ ಕೈಯಲ್ಲಿ ಕೊಡೆ ಹಿಡಿದುಕೊಂಡು ಅಪಾಯಕಾರಿ ಚಾಲನೆ ಮಾಡಿದ್ದಾರೆ. ಮಳೆ ನೀರು ಸೋರಿದ ಕಾರಣ ಅವರು ಹೀಗೆ ಮಾಡಬೇಕಾಗಿ ಬಂದಿದೆ. ಇಲಾಖೆ ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಮೊದಲು ಸರಿಯಾದ ಬಸ್ ವ್ಯವಸ್ಥೆ ಮಾಡಿ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 24, 2024 01:59 PM