ಪಕ್ಷ ನನಗೆ ಎಲ್ಲವನ್ನೂ ನೀಡಿದೆ, ಕಡೆಗಣಿಸಲಾಗುತ್ತಿದೆ ಎಂಬ ಅಪವಾದ ಸತ್ಯಕ್ಕೆ ದೂರ: ಬಿಎಸ್ ಯಡಿಯೂರಪ್ಪ

|

Updated on: Feb 09, 2023 | 1:46 PM

ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವ ಬಗ್ಗೆ ಅವರ ಗಮನ ಸೆಳೆದಾಗ ಬಿಎಸ್ ವೈ, ಅಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಅಂತ ಹೇಳಿದರು.

ರಾಯಚೂರು: ಬಿಸಿಲು ನಾಡು ರಾಯಚೂರು ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಸಿಂಧನೂರಿನಲ್ಲಿಂದು (Sindhanur) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಪಕ್ಷದಲ್ಲಿ ತಮ್ಮನ್ನು ಕಡೆಗಾಣಿಸಲಾಗುತ್ತಿದೆ ಎಂಬ ವಾದವನ್ನು ಅಲ್ಲಗಳೆದರು. ಪಕ್ಷ ತನಗೆ ಎಲ್ಲವನ್ನೂ ನೀಡಿದೆ, ಈಗ ರಾಷ್ಟ್ರಮಟ್ಟದಲ್ಲೂ (national level) ತಮಗೆ ಜವಾಬ್ದಾರಿಗಳನ್ನು ನೀಡಲಾಗಿದೆ, ಪರಿಸ್ಥಿತಿ ಹೀಗಿರುವಾಗ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಪ್ರಶ್ನೆ ಹೇಗೆ ಉದ್ಭವಿಸುತ್ತದೆ ಎಂದು ಯಡಿಯೂರಪ್ಪ ಹೇಳಿದರು. ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರ ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿರುವ ಬಗ್ಗೆ ಅವರ ಗಮನ ಸೆಳೆದಾಗ ಬಿಎಸ್ ವೈ, ಅಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ ಅಂತ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 09, 2023 01:46 PM