ಹಾಸನ: ಬೃಹತ್ ಗಾತ್ರದ ಕಾಳಿಂಗ ಸರ್ಪ ನೋಡಿ ಕಂಗಾಲಾದ ಜನ; ಇಲ್ಲಿದೆ ವಿಡಿಯೋ

ಹಾಸನ: ಬೃಹತ್ ಗಾತ್ರದ ಕಾಳಿಂಗ ಸರ್ಪ ನೋಡಿ ಕಂಗಾಲಾದ ಜನ; ಇಲ್ಲಿದೆ ವಿಡಿಯೋ

ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 07, 2023 | 2:23 PM

ಸಕಲೇಶಪುರ (Sakleshpur) ತಾಲ್ಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ(King Cobra)  ಪತ್ತೆಯಾಗಿದೆ. ಇದೇ ಗ್ರಾಮದ ಜಾರ್ಜ್ ಎಂಬುವರ ತೋಟದಲ್ಲಿ ಸುಮಾರು ಎಂಟು ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ.

ಹಾಸನ, ಅ.07: ಜಿಲ್ಲೆಯ ಸಕಲೇಶಪುರ (Sakleshpur) ತಾಲ್ಲೂಕಿನ ಮಾರನಹಳ್ಳಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ(King Cobra)  ಪತ್ತೆಯಾಗಿದೆ. ಇದೇ ಗ್ರಾಮದ ಜಾರ್ಜ್ ಎಂಬುವರ ತೋಟದಲ್ಲಿ ಸುಮಾರು ಎಂಟು ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಇದನ್ನು ನೋಡುತ್ತಿದ್ದಂತೆ ಗ್ರಾಮಸ್ಥರು ಗಾಬರಿಗೊಂಡಿದ್ದಾರೆ. ಕೂಡಲೇ ಕಾಳಿಂಗ ಸರ್ಪದ ಬಗ್ಗೆ ಮಾಹಿತಿ ತಿಳಿದು, ಸ್ಥಳಕ್ಕೆ ಬಂದ  ಉರುಗ ಪ್ರೇಮಿ ಮೊಹಮದ್​​ ದಸ್ತಗಿರ್​ ಅವರು ಸರ್ಪವನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್​ ಮಾಡಿ