ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ವ್ಯಕ್ತಿಯ ಹುಚ್ಚಾಟ: ಶಾಕ್ ಹೊಡೆದರೂ ಪ್ರಾಣಾಪಾಯದಿಂದ ಪಾರು
ವ್ಯಕ್ತಿ ಓರ್ವ ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ಹುಚ್ಚಾಟ ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ ಬಳಿ ನಡೆದಿದೆ. ತಕ್ಷಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದು, ಸಣ್ಣಪುಟ್ಟ ಗಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ತುಮಕೂರು, ಜುಲೈ 05: ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ ಬಳಿ ವಿದ್ಯುತ್ ಟ್ರಾನ್ಸ್ಫಾರ್ಮರ್ (electric transformer) ಏರಿ ವ್ಯಕ್ತಿಯ ಹುಚ್ಚಾಟ ಮೆರೆದಿರುವಂತಹ ಘಟನೆ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಲಕ್ಕುವನಹಳ್ಳಿ ನಿವಾಸಿ ಬಸವರಾಜು ಎಂಬಾತನಿಂದ ತೀವ್ರ ಹುಚ್ಚಾಟ ಮಾಡಲಾಗಿದೆ. ಬಸವರಾಜು ಹುಚ್ಚಾಟದ ಬಗ್ಗೆ ಸ್ಥಳೀಯರು ಬೆಸ್ಕಾಂ (Bescom), ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬರುವ ವೇಳೆಗೆ ಬಸವರಾಜುಗೆ ಕರೆಂಟ್ ಶಾಕ್ ಹೊಡೆದಿತ್ತು. ತಕ್ಷಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದಾರೆ. ಟ್ರಾನ್ಸ್ಫಾರ್ಮರ್ನಲ್ಲಿ ಸಿಲುಕಿ ನರಳಾಡುತ್ತಿದ್ದ ಬಸವರಾಜು ರಕ್ಷಣೆ ಮಾಡಲಾಗಿದೆ. ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ‘108’ ಆ್ಯಂಬುಲೆನ್ಸ್ನಲ್ಲಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
15ವರ್ಷಗಳ ಪಯಣ ಎಂದಿದ್ದ ಗೋಯೆಂಕಾಗೆ ಎರಡೇ ವರ್ಷಕ್ಕೆ ಬೇಡವಾದ ಪಂತ್
TV9 ಇಂಪ್ಯಾಕ್ಟ್: ಹಸಿದ ಹೊಟ್ಟೆಗೆ ಸಿಕ್ತು ಅನ್ನ, ಆದಿವಾಸಿಗಳು ಫುಲ್ ಖುಷ್
ಮುಂಬೈ ಮೇಯರ್ ಕಣ್ಣೆದುರೇ ತೆರೆದ ಮ್ಯಾನ್ಹೋಲ್ಗೆ ಬಿದ್ದ ಪೌರಕಾರ್ಮಿಕ
ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು
