ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ: ಶಾಕ್​ ಹೊಡೆದರೂ ಪ್ರಾಣಾಪಾಯದಿಂದ ಪಾರು

| Updated By: ಗಂಗಾಧರ​ ಬ. ಸಾಬೋಜಿ

Updated on: Jul 05, 2024 | 10:39 PM

ವ್ಯಕ್ತಿ ಓರ್ವ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ಹುಚ್ಚಾಟ ಮಾಡಿರುವಂತಹ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ ಬಳಿ ನಡೆದಿದೆ. ತಕ್ಷಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದು, ಸಣ್ಣಪುಟ್ಟ ಗಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರು, ಜುಲೈ 05: ಜಿಲ್ಲೆಯ ತಿಪಟೂರು ತಾಲೂಕಿನ ಸಾರ್ತುವಳ್ಳಿ ಬಳಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ (electric transformer) ಏರಿ ​​ವ್ಯಕ್ತಿಯ ಹುಚ್ಚಾಟ ಮೆರೆದಿರುವಂತಹ ಘಟನೆ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಲಕ್ಕುವನಹಳ್ಳಿ ನಿವಾಸಿ ಬಸವರಾಜು ಎಂಬಾತನಿಂದ ತೀವ್ರ ಹುಚ್ಚಾಟ ಮಾಡಲಾಗಿದೆ. ಬಸವರಾಜು ಹುಚ್ಚಾಟದ ಬಗ್ಗೆ ಸ್ಥಳೀಯರು ಬೆಸ್ಕಾಂ (Bescom), ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬರುವ ವೇಳೆಗೆ ಬಸವರಾಜುಗೆ ಕರೆಂಟ್ ಶಾಕ್ ಹೊಡೆದಿತ್ತು. ತಕ್ಷಣ ಬೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಿದ್ದಾರೆ. ಟ್ರಾನ್ಸ್​ಫಾರ್ಮರ್​​ನಲ್ಲಿ ಸಿಲುಕಿ ನರಳಾಡುತ್ತಿದ್ದ ಬಸವರಾಜು ರಕ್ಷಣೆ ಮಾಡಲಾಗಿದೆ.  ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ‘108’ ಆ್ಯಂಬುಲೆನ್ಸ್​ನಲ್ಲಿ ತಿಪಟೂರು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹೊನ್ನವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.