ಮುನಿರತ್ನರನ್ನು ದಿಢೀರ್ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು: ಐಸಿಯುನಲ್ಲಿ ಚಿಕಿತ್ಸೆ
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಮುನಿರತ್ನ, ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ದಿಢೀರ್ ಅವರನ್ನು ಜಯದೇವ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದು, ಕೆಲವು ಹೆಲ್ತ್ ಚೆಕಪ್ ಮಾಡಿದ್ದಾರೆ. ಈ ವೇಳೆ ಮುನಿರತ್ನ ಮೌನವಾಗಿದ್ದರು.
ಬೆಂಗಳೂರು, ಸೆಪ್ಟೆಂಬರ್ 16: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನರನ್ನ (Munirathna) ಪೊಲೀಸರು ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂಜೆ ಬೌರಿಂಗ್ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಕಾರ್ಡಿಯಾಲಜಿಸ್ಟ್‌ಗೆ ತೋರಿಸುವಂತೆ ವೈದ್ಯರು ಸೂಚಿನೆ ಮೇರೆಗೆ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳೆದ 1 ಗಂಟೆಯಿಂದ ಮುನಿರತ್ನಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರಿದೆ. ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿಚಾರಣೆ ಮಾಡಲಾಗುತ್ತಿದ್ದು, ಕಳದೆ ಎರಡು ದಿನದಿಂದ ಮಂಕಾಗಿದ್ದಾರೆ. ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ.
ವರದಿ: ಪ್ರದೀಪ್ ಕ್ರೈಂ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 16, 2024 10:31 PM