ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು, ಇಲ್ಲಿದೆ ವಿಡಿಯೋ

ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು, ಇಲ್ಲಿದೆ ವಿಡಿಯೋ

ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Oct 05, 2023 | 9:56 PM

ಅನುಮತಿ ಪಡೆಯದೆ ಹಾಕಿರುವ ಧ್ವಜ ಇದಾಗಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತರದಿರುವುದಕ್ಕೆ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಪಿಡಿಒ ಕರ್ತವ್ಯದ ಬಗ್ಗೆ ಎಚ್ಚರಿಕೆ ನೀಡಿದ್ದು, ನಿಮ್ಮ ಮೇಲೆ ಕೇಸ್ ಹಾಕೋದಾಗಿ ಎಚ್ಚರಿಸಿದ್ದಾರೆ. ಇನ್ನು ಗ್ರಾಮದಲ್ಲಿ ಅಹಿತಕರ ಘಟನೆಗೆ ಈ ಧ್ವಜ ಕಾರಣವಾಗುತ್ತಿತ್ತು. ಪೊಲೀಸರ ಸಕಾಲಿಕ ಕ್ರಮದಿಂದ ಪ್ರಕರಣ ತಿಳಿಯಾಗಿದೆ.

ಮಂಗಳೂರು, ಅ.05: ಜಿಲ್ಲೆಯ ಮೂಡುಬಿದಿರೆ(Muḍubidire) ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ(Islam Flag)ನೆಟ್ಟ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮೂಡಬಿದಿರೆ ಪೊಲೀಸರು ಧ್ವಜವನ್ನು ತೆರವು ಮಾಡಿದ್ದಾರೆ. ಈ ವೇಳೆ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್​ ಎಂಬುವವರು ಪಂಚಾಯತ್ ಅನುಮತಿ ಪಡೆಯದೆ ಹಾಕಿರುವ ಧ್ವಜ ಇದಾಗಿದ್ದು, ಈ ಬಗ್ಗೆ ಪೊಲೀಸರ ಗಮನಕ್ಕೆ ತರದಿರುವುದಕ್ಕೆ ಪಿಡಿಒ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ಪಿಡಿಒ ಕರ್ತವ್ಯದ ಬಗ್ಗೆ ಎಚ್ಚರಿಕೆ ನೀಡಿದ್ದು, ನಿಮ್ಮ ಮೇಲೆ ಕೇಸ್ ಹಾಕೋದಾಗಿ ಎಚ್ಚರಿಸಿದ್ದಾರೆ. ಇನ್ನು ಗ್ರಾಮದಲ್ಲಿ ಅಹಿತಕರ ಘಟನೆಗೆ ಈ ಧ್ವಜ ಕಾರಣವಾಗುತ್ತಿತ್ತು. ಪೊಲೀಸರ ಸಕಾಲಿಕ ಕ್ರಮದಿಂದ ಪ್ರಕರಣ ತಿಳಿಯಾಗಿದೆ. ಇನ್ನು ಧ್ವಜ ನೆಟ್ಟವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Oct 05, 2023 09:44 PM