ಸಮುದ್ರದಲ್ಲಿ ಮುಳುಗಿ ಹೋದ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ-ಇಲ್ಲಿದೆ ವಿಡಿಯೋ

ಸಮುದ್ರದಲ್ಲಿ ಮುಳುಗಿ ಹೋದ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ-ಇಲ್ಲಿದೆ ವಿಡಿಯೋ

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Feb 25, 2024 | 8:56 PM

ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಗುಜರಾತ್ ಪ್ರವಾಸದಲ್ಲಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದಾರೆ. ದ್ವಾರಕಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದು, ಇಂದು ಸ್ಕೂಬಾ ಡೈವಿಂಗ್ ಮೂಲಕ ಮುಳುಗಡೆಯಾಗಿರುವ ದ್ವಾರಕಾನಗರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಗುಜರಾತ್​, ಫೆ.25: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಗುಜರಾತ್ ಪ್ರವಾಸದಲ್ಲಿದ್ದು, ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದಾರೆ. ದ್ವಾರಕಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದು, ಇಂದು ಸ್ಕೂಬಾ ಡೈವಿಂಗ್ ಮೂಲಕ ಮುಳುಗಡೆಯಾಗಿರುವ ದ್ವಾರಕಾನಗರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಜೊತೆಗೆ ಶ್ರೀ ಕೃಷ್ಣನು ನಮ್ಮೆಲ್ಲರನ್ನು ಆಶೀರ್ವದಿಸಲಿ ಎಂದು ಬೇಡಿಕೊಂಡು ಅದೇ ಸಮಯದಲ್ಲಿ ಸಮುದ್ರದಲ್ಲಿ ನವಿಲು ಗರಿಗಳನ್ನು ಅರ್ಪಿಸಿದರು. ‘‘ನವಿಲುಗರಿಗಳನ್ನು ತೆಗೆದುಕೊಂಡು ಹೋಗಿ ಶ್ರೀಕೃಷ್ಣನ ಪಾದಗಳಿಗೆ ಅರ್ಪಿಸಬೇಕೆಂಬ ಹಲವು ವರ್ಷಗಳ ಕನಸು ಇದೀಗ ನನಸಾಗಿದೆ’’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ