ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 09, 2023 | 5:15 PM

ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಸರಣಿ ಅಪಘಾತವಾಗಿದ್ದು, ಕಾರು ನುಜ್ಜುಗುಜ್ಜು ಆಗಿದೆ. ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಹೌದು, ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಅಪಘಾತವಾಗಿದೆ.

ದಕ್ಷಿಣ ಕನ್ನಡ, ಸೆ.09: ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಸರಣಿ ಅಪಘಾತ (Accident)ವಾಗಿದ್ದು, ಕಾರು ನುಜ್ಜುಗುಜ್ಜು ಆಗಿದೆ. ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿದೆ. ಹೌದು, ಮಂಗಳೂರಿನ ಜೆಪ್ಪಿನ ಮೊಗರಿನಲ್ಲಿ ಮಿನಿ ಲಾರಿ, ಕಾರು, ಬಸ್ಸಿನ ನಡುವೆ ಅಪಘಾತವಾಗಿದೆ. ಹಠಾತ್ ಬ್ರೇಕ್ ಹಾಕಿದ ಪರಿಣಾಮ ಈ ಅವಘಡ ಸಂಭವಿಸಿದೆ. ಸಡನ್​ ಬ್ರೇಕ್​ ಹಾಕಿದ ಕಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾಗಿದ್ದು, ಅದರ ಹಿಂದೆ ಇದ್ದ ಕಾರು ಸಡನ್​ ಬ್ರೇಕ್​ ಹಾಕಿದ್ದಾರೆ. ಆದರೆ, ದುರಂತವೆಂಬಂತೆ ವೇಗದಲ್ಲಿದ್ದ ಕೇರಳ ಸಾರಿಗೆ ಬಸ್, ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಅಪ್ಪಚ್ಚಿಯಾಗಿದೆ. ಈ ವೇಳೆ ಕಾರಿನಲ್ಲಿ ತಲಪಾಡಿ ನಿವಾಸಿ ಮಂಗಳೂರಿನ ಎಂಸಿಎಫ್ ಉದ್ಯೋಗಿ ದಿನೇಶ್ ಎಂಬುವವರು ಸಿಲುಕಿದ್ದಾರೆ. ಇನ್ನು ಈ ಭೀಕರ ಅಪಘಾತದ ದೃಶ್ಯ ಸ್ಥಳೀಯ ಮನೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Sep 09, 2023 05:12 PM