ವಿವಿಧ ಬೇಡಿಕೆ ಈಡೇರಿಸುವಂತೆ ಹುಬ್ಬಳ್ಳಿಯಲ್ಲಿ ಆಡು, ಕುರಿಗಳೊಂದಿಗೆ ಪ್ರತಿಭಟನೆ
ವಿವಿಧ ಬೇಡಿಕೆ ಈಡೇರಿಸುವಂತೆ ಕುರುಬ ಸಮುದಾಯ ಆಡು, ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದೆ. ಆಡು, ಕುರಿಗಳೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್ ಭವನದಿಂದ ಚನ್ನಮ್ಮ ವೃತ್ತ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಎಸ್‌ಟಿ ಮೀಸಲಾತಿ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶ ನೀಡಬೇಕೆಂದು ಪ್ರದೇಶ ಕುರುಬ ಸಮಾಜ ಒಕ್ಕೂಟ ಒತ್ತಾಯಿಸಿದ್ದು, ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿ, (ಆಗಸ್ಟ್ 14): ವಿವಿಧ ಬೇಡಿಕೆ ಈಡೇರಿಸುವಂತೆ ಕುರುಬ ಸಮುದಾಯ ಆಡು, ಕುರಿಗಳೊಂದಿಗೆ ಪ್ರತಿಭಟನೆ ನಡೆಸಿದೆ. ಆಡು, ಕುರಿಗಳೊಂದಿಗೆ ಹುಬ್ಬಳ್ಳಿಯ ಅಂಬೇಡ್ಕರ್ ಭವನದಿಂದ ಚನ್ನಮ್ಮ ವೃತ್ತ ಮೂಲಕ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಎಸ್‌ಟಿ ಮೀಸಲಾತಿ, ಅರಣ್ಯ ಪ್ರದೇಶದಲ್ಲಿ ಕುರಿ ಮೇಯಿಸಲು ಅವಕಾಶ ನೀಡಬೇಕೆಂದು ಪ್ರದೇಶ ಕುರುಬ ಸಮಾಜ ಒಕ್ಕೂಟ ಒತ್ತಾಯಿಸಿದ್ದು, ತಹಶೀಲ್ದಾರ್ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.