ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಡಿಕೆಶಿಗೆ ಹೆಚ್​ಡಿಕೆ ಎಚ್ಚರಿಕೆ

Edited By:

Updated on: Jul 21, 2024 | 3:04 PM

ಹಾಸನದಲ್ಲಿ ಕೇಂದ್ರ ಸಚಿವ ಹೆಚ್​​ಕೆ ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ಗೆ ಎಚ್ಚರಿಕೆ ನೀಡಿದ್ದಾರೆ. ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ.

ಹಾಸನ, ಜುಲೈ 21: ನಿನ್ನೆ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಉತ್ತರ ಕನ್ನಡ ಜಿಲ್ಲೆಯ ಶಿರೂರಿಗೆ ಭೇಟಿ ನೀಡಿದ್ದರು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಈ ಬಗ್ಗೆ ಮಾತನಾಡಿ ಅವರು ಯಾಕೆ ಇಲ್ಲಿಗೆ ಬರುತ್ತಾರೆ. ಏನು ಮಿಲಿಟರಿ ಕರಕೊಂಡು ಬಂದಿದ್ದಾರೆ? ಎಂದು ಕಿಡಿಕಾರಿದ್ದರು. ಇಲ್ಲಿಗೆ ಮಿಲಿಟರಿ ಬರುವ ಕಾಲನೂ ಬರುತ್ತೆ ಎಂದು ಡಿಕೆ ಶಿವಕುಮಾರ್​ಗೆ ಹೆಚ್​ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More