ಸಚಿವರ ಆಪ್ತನ ಮನೆಯಲ್ಲಿ ಕಂತೆ ಕಂತೆ ನಗದು, ಹಣ ಎಣಿಸಿ ಎಣಿಸಿ ಸುಸ್ತಾದ ಇಡಿ ಅಧಿಕಾರಿಗಳು
ರಾಂಚಿಯಲ್ಲಿರುವ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಅಪ್ತ ಕಾರ್ಯದರ್ಶಿ ಮನೆ ಮೇಲೆಯೂ ದಾಳಿ ನಡೆಸಲಾಗಿತ್ತು. 25 ಕೋಟಿ ರೂ. ಗೂ ಅಧಿಕ ಹಣಗಳ ಕಂತೆಗಳನ್ನು ಪತ್ತೆ ಮಾಡಿದ್ದಾರೆ. ಇಡಿ ಅಧಿಕಾರಿಗಳು ಹಣವನ್ನು ಇನ್ನು ಎಣಿಕೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಕೂಡ ಎಎನ್ಐ ಹಂಚಿಕೊಂಡಿದೆ. ದೊಡ್ಡ ಪ್ರಮಾಣದ ನಗದು ಪತ್ತೆಯಾಗಿರುವ ಕಾರಣ ಎಣಿಕೆ ತಡವಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ರಾಂಚಿ, ಮೇ.6: ಇಂದು ಇಡಿ ಅಧಿಕಾರಿಗಳು ಜಾರ್ಖಂಡ್ನ (Jharkhand) ಹಲವು ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಈ ಪೈಕಿ ರಾಂಚಿಯಲ್ಲಿರುವ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ (Alamgir Alam) ಅವರ ಅಪ್ತ ಕಾರ್ಯದರ್ಶಿ ಮನೆ ಮೇಲೆಯೂ ದಾಳಿ ನಡೆಸಲಾಗಿತ್ತು. 25 ಕೋಟಿ ರೂ. ಗೂ ಅಧಿಕ ಹಣಗಳ ಕಂತೆಗಳನ್ನು ಪತ್ತೆ ಮಾಡಿದ್ದಾರೆ. ಇಡಿ ಅಧಿಕಾರಿಗಳು ಹಣವನ್ನು ಇನ್ನು ಎಣಿಕೆ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದನ್ನು ಕೂಡ ಎಎನ್ಐ ಹಂಚಿಕೊಂಡಿದೆ. ದೊಡ್ಡ ಪ್ರಮಾಣದ ನಗದು ಪತ್ತೆಯಾಗಿರುವ ಕಾರಣ ಎಣಿಕೆ ತಡವಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫೆಬ್ರವರಿ 2023ರಂದು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮಾಜಿ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಅವರ ಯೋಜನೆಗಳನ್ನು ಮಂಜೂರು ಮಾಡಲು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅವರನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ರಾಂಚಿಯ ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ