ಹುಬ್ಬಳ್ಳಿಯಲ್ಲಿ ವೀಲಿಂಗ್​ ಮಾಡುತ್ತಿದ್ದ ಪುಂಡರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್​ ಪೊಲೀಸ್​; ಐವರು ಯುವಕರು ಅರೆಸ್ಟ್​

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 14, 2023 | 12:39 PM

ನಗರದಲ್ಲಿ ಬೈಕ್ ವೀಲಿಂಗ್ ಮಾಡುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನಲೆ ವೀಲಿಂಗ್ ಮಾಡುವ ಯುವಕರಿಗೆ ಟ್ರಾಫಿಕ್​ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ಹುಬ್ಬಳ್ಳಿ, ಜು.14: ನಗರದಲ್ಲಿ ಬೈಕ್ ವೀಲಿಂಗ್(Bike Wheeling) ಮಾಡುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಈ ಹಿನ್ನಲೆ ವೀಲಿಂಗ್ ಮಾಡುವ ಯುವಕರಿಗೆ ಟ್ರಾಫಿಕ್​ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೌದು ಹುಬ್ಬಳ್ಳಿ(Hubballi)ಯ ಹೊರವಲಯದ ಗದಗ-ಕಾರವಾರ ರಸ್ತೆಯಲ್ಲಿ ರಾತ್ರಿ ಸಮಯದಲ್ಲಿ ವೀಲಿಂಗ್ ಮಾಡುತ್ತಿದ್ದ ಐವರು ಯುವಕರನ್ನ ಬಂಧಿಸಿದ್ದಾರೆ. ಸುಜನ, ಜುಬೇರ್, ಫರ್ದಿನ್ ಹಾಗೂ ಇಬ್ಬರ ಹಿಂಬದಿಯ ಸವಾರರು ವಶಕ್ಕೆ. ಇನ್ನು ಇವರು ಬೈಕ್ ವೀಲಿಂಗ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್​ಲೋಡ್​ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತನಿಖೆ ಕೈಗೊಂಡ ದಕ್ಷಿಣ ಸಂಚಾರಿ ಪೊಲೀಸರು ಯುವಕರ ಗುಂಪನ್ನ ಅರೆಸ್ಟ್​ ಮಾಡಿದ್ದಾರೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More