ಚಿತ್ರದುರ್ಗ: ರೂಂಗೆ ಹಾಕಿ ವಾರ್ಡನ್ಗೆ ಬಾರಿಸಿ ಎಂದಿದ್ದ ಶಾಸಕ ವೀರೇಂದ್ರ ಪಪ್ಪಿ ವಿಡಿಯೋ ವೈರಲ್
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರು ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಹಾಸ್ಟೆಲ್ಗೆ ಭೇಟಿ ನೀಡಿದ್ದರು. ಈ ವೇಳೆ ವಾರ್ಡನ್ಗೆ ಹೊಡೆಯಿರಿ ಎಂದು ಶಾಸಕ ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದೆ.
ಚಿತ್ರದುರ್ಗ, ಆ.5: ವಾರ್ಡನ್ಗೆ ಹೊಡೆಯಿರಿ ಎಂದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ(K C Veerendra Puppy) ಅವರ ಪ್ರಚೋದನೆ ವಿಡಿಯೋ ವೈರಲ್ ಆಗುತ್ತಿದೆ. ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಅವರು ಕಾನೂನು ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಹಾಸ್ಟೆಲ್ಗೆ ಭೇಟಿ ನೀಡಿದ್ದರು. ಈ ವೇಳೆ ವಾರ್ಡನ್ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳು ‘ಕೊಳೆತ ತರಕಾರಿ ಹಾಕಿದ ಉಪಹಾರ, ಊಟ ನೀಡುತ್ತಾರೆಂದು ಆರೋಪ ಮಾಡಿದ್ದರು. ಇದರಿಂದ ರೊಚ್ಚಿಗೆದ್ದ ಶಾಸಕ ‘ಇನ್ನೊಮ್ಮೆ ಹೀಗಾದರೆ ವಾರ್ಡನ್ಗೆ ಹೊಡೆಯಿರಿ ಎಂದು ವಿದ್ಯಾರ್ಥಿಗಳಿಗೆ ಪ್ರಚೋದಿಸಿದ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us