Video: ಕಾರು ಹಿಂದೆ ಓಡೋಡಿ ಬಂದ ಮಹಿಳೆ: ನಿಲ್ಲಿಸದ ಸಂಸದ ಡಿಕೆ ಸುರೇಶ್
ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದ ರೈತರಿಗೆ ಸಾಗುವಳಿ ಪತ್ರ ವಿತರಣಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರು ಹತ್ತಲು ಬಿಡದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ರನ್ನು ಅಡ್ಡಗಟ್ಟಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ.
ಆನೇಕಲ್, ಆಗಸ್ಟ್ 12: ಸರ್ಕಾರಿ ಜಮೀನಿನಲ್ಲಿ ಹಲವು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದ ರೈತರಿಗೆ ಸಾಗುವಳಿ ಪತ್ರ ವಿತರಣಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಾರು ಹತ್ತಲು ಬಿಡದೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ (DK Suresh) ರನ್ನು ಅಡ್ಡಗಟ್ಟಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ಸಾಗುವಳಿ ಹಕ್ಕುಪತ್ರ ಸಿಗದ ಕುಟುಂಬಗಳಿಂದ ಮುತ್ತಿಗೆ ಹಾಕಲಾಗಿದೆ. ಈ ವೇಳೆ ಓರ್ವ ಮಹಿಳೆ ಡಿ.ಕೆ ಸುರೇಶ್ ಅವರ ಕಾರು ಹಿಂದೆ ಓಡೋಡಿ ಬಂದ್ದರೂ ನಿಲ್ಲಿಸದೇ ಹಾಗೆಯೇ ತೆರಳಿದ್ದಾರೆ. ಹಲವು ವರ್ಷಗಳಿಂದ ಜಮೀನು ಉಳುಮೆ ಮಾಡುತ್ತಿದ್ದ 150 ಕುಟುಂಬಗಳ ಪೈಕಿ 114 ಕುಟುಂಬಗಳಿಗೆ ಸಾಗುವಳಿ ಚೀಟಿ ವಿತರಣೆ ಮಾಡಲಾಗಿದೆ. ಸಾಗುವಳಿ ಚೀಟಿ ಸಿಗದ 36 ಕುಟುಂಬಗಳಿಂದ ಡಿ.ಕೆ.ಸುರೇಶ್ಗೆ ಮುತ್ತಿಗೆ ಹಾಕಲಾಗಿತ್ತು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
