ಕೋಲಾರ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!

Edited By:

Updated on: May 08, 2026 | 10:22 AM

ಕೋಲಾರ ತಾಲ್ಲೂಕಿನ ಮಲ್ಲಸಂದ್ರದಲ್ಲಿ ಖದೀಮರು ಮನೆಯೊಂದರಿಂದ ನಗದು, ಚಿನ್ನಾಭರಣ ಕಳವು ಮಾಡಿದ್ದಾರೆ. ನಂತರ ಈ ಕೃತ್ಯದ ಬಗ್ಗೆ ಯಾರಿಗೂ ಅನುಮಾನ ಬರಬಾರದೆಂದು ಮನೆಗೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದರಿಂದ ಬಡ ಮಹಿಳೆಯ ಕುಟುಂಬ ಬೀದಿಗೆ ಬಿದ್ದಿದೆ. ವೇಮಗಲ್ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಕೋಲಾರ, ಮೇ 7: ಜಿಲ್ಲೆಯ ಕೋಲಾರ ತಾಲ್ಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ತಡರಾತ್ರಿ ಖದೀಮರು ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆ ಹಾಗೂ ನಗದನ್ನು ದೋಚಿ ನಂತರ ಕೃತ್ಯ ಬೆಳಕಿಗೆ ಬಾರದೇ ಇರಲು ಮನೆಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಗ್ರಾಮದ ಶಾರದಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಜೀವನೋಪಾಯಕ್ಕಾಗಿ ಟೀ ಅಂಗಡಿ ನಡೆಸುತ್ತಿದ್ದ ಈ ಬಡ ಕುಟುಂಬ ಇದೀಗ ಬೀದಿಗೆ ಬಿದ್ದಿದೆ. ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ಲಾಕರ್ ಮುರಿದು ಅದರಲ್ಲಿದ್ದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾರೆ. ಬಳಿಕ ಈ ಕಳ್ಳತನದ ಕೃತ್ಯದ ಬಗ್ಗೆ ಯಾರಿಗೂ ಅನುಮಾನ ಬಾರದಂತೆ ಮಾಡಲು ಇಡೀ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ದಿನಸಿ ಪದಾರ್ಥಗಳು ಹಾಗೂ ಅಗತ್ಯ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More