Uttara Kannada: ಜ್ಯುವೆಲ್ಲರಿ ಅಂಗಡಿಯಲ್ಲಿ ಚಿನ್ನಾಭರಣ ಕಳ್ಳತನ, ಕೃತ್ಯ ಸಿಸಿಟಿವಿಯಲ್ಲಿ ಸೆರೆ; ಆರೋಪಿಗಳು ಅಂದರ್
ಜಿಲ್ಲೆಯ ಶಿರಸಿ ನಗರದ ಮಾರುಕಟ್ಟೆ ರಸ್ತೆಯಲ್ಲಿರುವ ಓಂಕಾರ್ ಜ್ಯುವೆಲ್ಲರಿ ಅಂಗಡಿಯಲ್ಲಿ ಸುಮಾರು 93ಸಾವಿರ ರೂ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ: ಜಿಲ್ಲೆಯ ಶಿರಸಿ ನಗರದ ಮಾರುಕಟ್ಟೆ ರಸ್ತೆಯಲ್ಲಿರುವ ಓಂಕಾರ್ ಜ್ಯುವೆಲ್ಲರಿ ಅಂಗಡಿಯಲ್ಲಿ ಸುಮಾರು 93ಸಾವಿರ ರೂ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಶಿರಸಿ ನಗರ ಠಾಣೆ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಕಳ್ಳತನವಾದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗದಗದ ಸಂಗೀತಾ ಯಲ್ಲೋಸಾ ಬಾಕಳೆ, ಶೋಭಾ ಬಾಯಿ ಲಕ್ಷಮಣಸಾ ಜಿತೂರಿ ಹಾಗೂ ಹುಬ್ಬಳ್ಳಿಯ ರಾಜೇಶ್ವರಿ ಬಾಂಡಗೇ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಜೂ.15ರ ವಾಮನ ನಾಗೇಶ್ ರಾಯ್ಕರ್ ಎಂಬುವವರಿಗೆ ಸೇರಿದ ಓಂಕಾರ್ ಜ್ಯುವೆಲ್ಲರಿ ಅಂಗಡಿಗೆ ಬಂದು, ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದರು. ಕಳ್ಳತನದ ದೃಶ್ಯಾವಳಿಗಳು ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿಗಳನ್ನು ಆಧಾರವಾಗಿಟ್ಟುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಶಿರಸಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
