ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ
ಸಚಿವ ಸಿ.ಎಂ. ಇಬ್ರಾಹಿಂ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ. ಕರ್ನಾಟಕದಲ್ಲಿ ಮೂರನೇ ಶಕ್ತಿ ಬಗ್ಗೆ ಪ್ರವಾಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ತಮ್ಮ ನಿರ್ಧಾರ ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಮೂರನೇ ಶಕ್ತಿ ಬಗ್ಗೆ ಪ್ರವಾಸ ಮಾಡುತ್ತೇವೆ. ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ (C.M. Ibrahim) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ನವರು ಬಿಜೆಪಿಯ ಬಸ್ ಸ್ಟ್ಯಾಂಡ್ನಲ್ಲಿ ಕುಳಿತಿದ್ದಾರೆ. ಆದರೆ ಜೆಡಿಎಸ್ನವರಿಗೆ ಬಸ್ ಇಲ್ಲ, ಏನೂ ಇಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ್ದು, ನನ್ನ ಮನಸ್ಸಿನಲ್ಲಿ ನಿಶ್ಚಳವಾಗಿದ್ದೇನೆ, ಜನರ ಹಿತ ಮುಖ್ಯ ಎಂದು ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Apr 18, 2025 02:12 PM