ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದ ಮಾಜಿ ಸಚಿವ ಸಿಎಂ ಇಬ್ರಾಹಿಂ

Edited By:

Updated on: Apr 18, 2025 | 2:14 PM

ಸಚಿವ ಸಿ.ಎಂ. ಇಬ್ರಾಹಿಂ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ. ಕರ್ನಾಟಕದಲ್ಲಿ ಮೂರನೇ ಶಕ್ತಿ ಬಗ್ಗೆ ಪ್ರವಾಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಈ ವೇಳೆ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ತಮ್ಮ ನಿರ್ಧಾರ ಇನ್ನೂ ಸ್ಪಷ್ಟವಾಗಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರು, ಏಪ್ರಿಲ್​ 18: ಕರ್ನಾಟಕದಲ್ಲಿ ಮೂರನೇ ಶಕ್ತಿ ಬಗ್ಗೆ ಪ್ರವಾಸ ಮಾಡುತ್ತೇವೆ. ಹೊಸ ಪಕ್ಷ ಕಟ್ಟುವ ಇಚ್ಛೆ ಇದೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ (C.M. Ibrahim) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್​ನವರು ಬಿಜೆಪಿಯ ಬಸ್ ಸ್ಟ್ಯಾಂಡ್​ನಲ್ಲಿ‌ ಕುಳಿತಿದ್ದಾರೆ. ಆದರೆ ಜೆಡಿಎಸ್​ನವರಿಗೆ ಬಸ್ ಇಲ್ಲ, ಏನೂ ಇಲ್ಲ ಎಂದಿದ್ದಾರೆ. ಇನ್ನು ಕಾಂಗ್ರೆಸ್​ ಪಕ್ಷ ಸೇರ್ಪಡೆ ವಿಚಾರವಾಗಿ ಮಾತನಾಡಿದ್ದು, ನನ್ನ ಮನಸ್ಸಿನಲ್ಲಿ‌ ನಿಶ್ಚಳವಾಗಿದ್ದೇನೆ, ಜನರ ಹಿತ ಮುಖ್ಯ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Apr 18, 2025 02:12 PM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More