‘ನನ್ನ ಪ್ರಕಾರ ಡಿಸಿಎಂ ಹುದ್ದೇನೇ ಬೇಡ’ ಎಂದ ರಾಮಲಿಂಗಾ ರೆಡ್ಡಿ!

Updated on: May 30, 2026 | 3:04 PM

ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು.

ಬೆಂಗಳೂರು, ಮೇ 30: ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನು ಆಯ್ಕೆ ಮಾಡಲು ಇಂದು ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ಸಭೆ ಕರೆಯಲಾಗಿದೆ. ಈ ಬಗ್ಗೆ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ಅವರು ಮಾತನಾಡಿ, ಡಿ.ಕೆ. ಶಿವಕುಮಾರ್ ಅವರನ್ನು ಹೈಕಮಾಂಡ್ ಈಗಾಗಲೇ ಪ್ರಪೋಸ್ ಮಾಡಿರುವ ಕಾರಣ ನಾಯಕನ ಆಯ್ಕೆಯಲ್ಲಿ ಯಾವುದೇ ಸ್ಪರ್ಧೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದು ಕೇವಲ ರಾಜ್ಯಪಾಲರಿಗೆ ಮಾಹಿತಿ ನೀಡುವ ಔಪಚಾರಿಕ ಸಭೆಯಾಗಿದೆ ಎಂದರು.

ಮಂತ್ರಿಮಂಡಲದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನಗಳ ಕುರಿತ ಚರ್ಚೆಗಳ ಬಗ್ಗೆ ಪ್ರತಿಕ್ರಿಯಿಸಿದ ರಾಮಲಿಂಗಾ ರೆಡ್ಡಿ, ಡಿಸಿಎಂ ಹುದ್ದೆ ಅನಗತ್ಯ ಎಂಬುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಇದು ಸಾಂವಿಧಾನಿಕ ಅಥವಾ ಪದವಿಯ ಹುದ್ದೆಯಲ್ಲ, ಹಾಗೂ ಅಂತಹ ಹುದ್ದೆಗಳನ್ನು ಸೃಷ್ಟಿಸಿದರೆ ಇತರ ಸಮುದಾಯಗಳಿಂದ ಬೇಡಿಕೆಗಳು ಹೆಚ್ಚಾಗುತ್ತವೆ ಎಂದರು. ತಮ್ಮ ಹಿರಿತನಕ್ಕೆ ತಕ್ಕಂತೆ ಖಾತೆ ನೀಡಬೇಕು ಎಂದು ಅವರು ನಿರೀಕ್ಷಿಸುತ್ತಿದ್ದು, ಯಾವುದೇ ಖಾತೆಗಾಗಿ ಲಾಬಿ ಮಾಡುವುದಿಲ್ಲ ಎಂದು ತಿಳಿಸಿದರು. ಪ್ರಸ್ತುತ ಮತ್ತು ಭವಿಷ್ಯದ ಸಚಿವ ಸಂಪುಟದಲ್ಲಿ ಯಾವ ಖಾತೆ ನೀಡಿದರೂ ಸಮರ್ಥವಾಗಿ ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More