‘ವರಾಹ ರೂಪಂ’ ವಿವಾದವನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆ ಇರಲಿಲ್ಲ; ಇದು ದ್ವೇಷದ ಕಿಡಿ ಹಚ್ಚುವ ಪ್ರಯತ್ನ ಎಂದ ಶಶಿರಾಜ್ ಕಾವೂರ್
'ಕಾಂತಾರ' ಚಿತ್ರದ ಕೇಂದ್ರ ಬಿಂದು ಆಗಿರುವ 'ವರಾಹ ರೂಪಂ' ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್‌ಗೆ ಬಿಗ್ ರಿಲೀಫ್ ಸಿಕ್ಕಿದೆ.
‘ಕಾಂತಾರ’ (kantara) ಚಿತ್ರದ ಕೇಂದ್ರ ಬಿಂದು ಆಗಿರುವ ‘ವರಾಹ ರೂಪಂ’ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ‘ವರಾಹ ರೂಪಂ’ ಹಾಡಿನ ಮೇಲೆ ಕೃತಿಚೌರ್ಯ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಯಿಕ್ಕೋಡ್ ಕೋರ್ಟ್ ವಜಾಗೊಳಿಸಿದೆ. ಈ ಕುರಿತಾಗಿ ‘ವರಾಹ ರೂಪಂ’ ಹಾಡಿನ ಸಾಹಿತ್ಯ ಬರೆದಿರುವ ಶಶಿರಾಜ್ ಕಾವೂರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿವಾದವನ್ನು ಮಾತುಕತೆಯಲ್ಲಿ ಬಗೆಹರಿಸಬಹುದಿತ್ತು. ಇಷ್ಟು ದೊಡ್ಡದು ಮಾಡುವ ಅವಶ್ಯಕತೆ ಇರಲಿಲ್ಲ. ಒಂದು ರೀತಿಯಲ್ಲಿ ದ್ವೇಷದ ಕಿಡಿ ಹಚ್ಚುವ ಪ್ರಯತ್ನ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

