‘ವರಾಹ ರೂಪಂ’ ವಿವಾದವನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆ ಇರಲಿಲ್ಲ; ಇದು ದ್ವೇಷದ ಕಿಡಿ ಹಚ್ಚುವ ಪ್ರಯತ್ನ ಎಂದ ಶಶಿರಾಜ್​ ಕಾವೂರ್

| Updated By: ಗಂಗಾಧರ​ ಬ. ಸಾಬೋಜಿ

Updated on: Nov 25, 2022 | 9:27 PM

'ಕಾಂತಾರ' ಚಿತ್ರದ ಕೇಂದ್ರ ಬಿಂದು ಆಗಿರುವ 'ವರಾಹ ರೂಪಂ' ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್‌ಗೆ ಬಿಗ್​ ರಿಲೀಫ್​ ಸಿಕ್ಕಿದೆ.

‘ಕಾಂತಾರ’ (kantara) ಚಿತ್ರದ ಕೇಂದ್ರ ಬಿಂದು ಆಗಿರುವ ‘ವರಾಹ ರೂಪಂ’ ಹಾಡಿಗೆ ಕೃತಿಚೌರ್ಯದ ಆರೋಪ ಮಾಡಲಾಗಿತ್ತು. ಸದ್ಯ ಈ ವಿಚಾರವಾಗಿ ಹೊಂಬಾಳೆ ಫಿಲ್ಮ್ಸ್‌ಗೆ ಬಿಗ್​ ರಿಲೀಫ್​ ಸಿಕ್ಕಿದೆ. ‘ವರಾಹ ರೂಪಂ’ ಹಾಡಿನ ಮೇಲೆ ಕೃತಿಚೌರ್ಯ ಆರೋಪ ಮಾಡಿದ್ದ ‘ಥೈಕ್ಕುಡಂ ಬ್ರಿಡ್ಜ್’ ಅರ್ಜಿಯನ್ನು ಕೇರಳದ ಕೋಯಿಕ್ಕೋಡ್ ಕೋರ್ಟ್‌ ವಜಾಗೊಳಿಸಿದೆ. ಈ ಕುರಿತಾಗಿ ‘ವರಾಹ ರೂಪಂ’ ಹಾಡಿನ ಸಾಹಿತ್ಯ ಬರೆದಿರುವ ಶಶಿರಾಜ್​ ಕಾವೂರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ವಿವಾದವನ್ನು ಮಾತುಕತೆಯಲ್ಲಿ ಬಗೆಹರಿಸಬಹುದಿತ್ತು. ಇಷ್ಟು ದೊಡ್ಡದು ಮಾಡುವ ಅವಶ್ಯಕತೆ ಇರಲಿಲ್ಲ. ಒಂದು ರೀತಿಯಲ್ಲಿ ದ್ವೇಷದ ಕಿಡಿ ಹಚ್ಚುವ ಪ್ರಯತ್ನ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.