Video: ಪೂಂಚ್ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆ, ವಾರದಲ್ಲಿ ಮೂರನೇ ಘಟನೆ
ಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರವೂ ಇಂಥಾ ಘಟನೆಗಳು ಮುಂದುವರೆದಿವೆ. ಮೊದಲು ಡ್ರೋನ್ಗಳು ಪತ್ತೆಯಾದಾಗ ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMOಗಳು) ಉನ್ನತ ಮಟ್ಟದ ಮಾತುಕತೆ ನಡೆಸಿದ್ದರು.ಭಾರತವು ತನ್ನ ಕಳವಳವನ್ನು ವ್ಯಕ್ತಪಡಿಸಿತ್ತು. ಮುಂಬರುವ ಗಣರಾಜ್ಯೋತ್ಸವದ ಆಚರಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸಶಸ್ತ್ರ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಹೆಚ್ಚಿನ ಕಟ್ಟೆಚ್ಚರವಹಿಸಿವೆ.
ಶ್ರೀನಗರ,ಜನವರಿ 16: ಜಮ್ಮು ಮತ್ತು ಕಾಶ್ಮೀರದ ಪೂಂಚ್ನಲ್ಲಿ ಪಾಕಿಸ್ತಾನಿ ಡ್ರೋನ್ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ. ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ ನಂತರವೂ ಇಂಥಾ ಘಟನೆಗಳು ಮುಂದುವರೆದಿವೆ. ಮೊದಲು ಡ್ರೋನ್ಗಳು ಪತ್ತೆಯಾದಾಗ ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (DGMOಗಳು) ಉನ್ನತ ಮಟ್ಟದ ಮಾತುಕತೆ ನಡೆಸಿದ್ದರು.ಭಾರತವು ತನ್ನ ಕಳವಳವನ್ನು ವ್ಯಕ್ತಪಡಿಸಿತ್ತು. ಮುಂಬರುವ ಗಣರಾಜ್ಯೋತ್ಸವದ ಆಚರಣೆಯನ್ನು ಗಮನದಲ್ಲಿಟ್ಟುಕೊಂಡು ಭಾರತೀಯ ಸಶಸ್ತ್ರ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಎಲ್‌ಒಸಿ ಮತ್ತು ಅಂತಾರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಹೆಚ್ಚಿನ ಕಟ್ಟೆಚ್ಚರವಹಿಸಿವೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 16, 2026 08:08 AM

