AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ಪತಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ಪತಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್

Basavaraj Yaraganavi
| Edited By: |

Updated on: Oct 25, 2026 | 9:30 AM

Share

ತೀರ್ಥಹಳ್ಳಿ ತಾಲೂಕಿನ ಹೊದಲ ಗ್ರಾಮದಲ್ಲಿ ವರದಕ್ಷಿಣೆ ಮತ್ತು ಕೌಟುಂಬಿಕ ಕಿರುಕುಳಕ್ಕೆ ಅಕ್ಷತಾ ಎಂಬ ಗೃಹಿಣಿ ಬಲಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಕ್ಷತಾ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪತಿ ಪುರುಷೋತ್ತಮ ಸೇರಿದಂತೆ ನಾಲ್ವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಮಗಳ ಸಾವಿಗೆ ನ್ಯಾಯಕ್ಕಾಗಿ ಪೋಷಕರು ಆಗ್ರಹಿಸುತ್ತಿದ್ದಾರೆ.

ಶಿವಮೊಗ್ಗ, ಅಕ್ಟೋಬರ್ 25: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊದಲ ಗ್ರಾಮದಲ್ಲಿ ವರದಕ್ಷಿಣೆ ಹಾಗೂ ಕೌಟುಂಬಿಕ ಕಿರುಕುಳದಿಂದಾಗಿ ಅಕ್ಷತಾ ಎಂಬ ಗೃಹಿಣಿ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅಕ್ಷತಾ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಹಿನ್ನೆಲೆ ಅಕ್ಷತಾ ಅವರ ಪತಿ ಪುರುಷೋತ್ತಮ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಾಗಿದೆ. ಅಕ್ಷತಾ ಅವರು ಎಂಟು ವರ್ಷಗಳ ಹಿಂದೆ ಪುರುಷೋತ್ತಮ ಅವರನ್ನು ವಿವಾಹವಾಗಿದ್ದರು. ಮೃತಳ ಅತ್ತೆಯು ಪತಿಯ ಎದುರೇ ಪೊರಕೆಯಿಂದ ಹಲ್ಲೆ ನಡೆಸಿ, ನಿಂದಿಸಿದ್ದಳು ಎಂದು ಆರೋಪಿಸಲಾಗಿದೆ.

ತಮ್ಮ ಮಗಳ ಸಾವಿಗೆ ನ್ಯಾಯ ಒದಗಿಸುವಂತೆ ಅಕ್ಷತಾ ಅವರ ಪೋಷಕರು ಈಗ ಗಂಭೀರವಾಗಿ ಆಗ್ರಹಿಸುತ್ತಿದ್ದಾರೆ. ವರದಕ್ಷಿಣೆ ಮತ್ತು ಕೌಟುಂಬಿಕ ಹಿಂಸೆಯು ಈ ಗೃಹಿಣಿಯ ಸಾವಿಗೆ ಕಾರಣವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Basavaraj Yaraganavi
Basavaraj Yaraganavi