‘ಇದು ವಿದ್ಯಾರ್ಥಿಗಳ ಗೆಲುವು’: ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಮಾತು​

Edited By:

Updated on: Jul 25, 2026 | 5:16 PM

ಮುಖ್ಯಾಂಶಗಳು

  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ
  • ಯುವ ಸಮುದಾಯ ಕೇಂದ್ರ ಸರ್ಕಾರವನ್ನೇ ಬಗ್ಗಿಸಿದ್ದಾರೆ ಎಂದ ಬಿ.ಕೆ.ಹರಿಪ್ರಸಾದ್
  • ವಿದ್ಯಾರ್ಥಿಗಳ ಹೋರಾಟಕ್ಕೆ ಜಯ ಸಿಕ್ಕಿದೆ

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಂತರ, ಬಿ.ಕೆ. ಹರಿಪ್ರಸಾದ್ ಶಿಕ್ಷಣ ಕ್ಷೇತ್ರದಲ್ಲಿ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ನಾಗಪುರ ವಿಶ್ವವಿದ್ಯಾಲಯದ ಪ್ರಭಾವದಿಂದ ಅನರ್ಹರು ನೇಮಕಗೊಂಡಿದ್ದಾರೆ ಎಂದ ಅವರು, ಇತ್ತೀಚಿನ ಪ್ರತಿಭಟನೆಗಳ ಹಿಂದೆ ಕ್ರಿಮಿನಲ್‌ಗಳಿದ್ದಾರೆ ಎಂಬ ಆರೋಪವನ್ನು ನಿರಾಕರಿಸಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ನ್ಯಾಯ ಸಿಗಬೇಕು ಎಂದು ಹರಿಪ್ರಸಾದ್ ಪ್ರತಿಪಾದಿಸಿದ್ದಾರೆ.

ಬೆಂಗಳೂರು, ಜುಲೈ 25: ‘ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್​ ರಾಜೀನಾಮೆ ನೀಡಿರುವುದು ವಿದ್ಯಾರ್ಥಿಗಳ ಗೆಲುವು. ನಾವು ಕಾಕ್ರೋಚ್ ಪಾರ್ಟಿನೋ, ಇನ್ನೊಂದು ಪಾರ್ಟಿನೋ ಅಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕು, ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ನಾವು ಹೋರಾಟ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್​ ಹೇಳಿದ್ದಾರೆ. ಪ್ರಧಾನ್ ರಾಜೀನಾಮೆ ಕ್ರೆಡಿಟ್ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದಾಗ ಅವರನ್ನು ದೇಶದ್ರೋಹಿಗಳು ಎಂದು ಕರೆದರು. ಆದರೆ, ಇಡೀ ಬಿಜೆಪಿ ಮತ್ತು ನಾಗಪುರ್ ಯುನಿವರ್ಸಿಟಿನಲ್ಲಿರುವವರು ನಕಲಿ ದೇಶಭಕ್ತರು’ ಎಂದು ಹರಿಪ್ರಸಾದ್ ತೀವ್ರ ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More