ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ

Updated on: Apr 26, 2026 | 9:37 AM

ಇತ್ತೀಚೆಗೆ ನಟ ಚೇತನ್ ಅಹಿಂಸಾ ನೀಡಿದ್ದ ಹೇಳಿಕೆಗೆ ಡಾ. ರಾಜ್​ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ ಕೇಳುವಾಗ ಸುತ್ತಿ ಬಳಸಿ ಮಾತನಾಡಿದರು. ವಿಡಿಯೋ ನೋಡಿ..

ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಸೃಷ್ಟಿ ಆಯಿತು. ಸಮಾಧಿ ನಿರ್ಮಾಣಕ್ಕೆ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿದ್ದು ಸೂಕ್ತವಲ್ಲ ಎಂದು ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಡಾ. ರಾಜ್​ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ ಕೇಳುವಾಗ ಸುತ್ತಿ ಬಳಸಿ ಮಾತನಾಡಿದರು. ನೇರವಾಗಿ ಅವರು ಕ್ಷಮೆ ಕೇಳುವುದಕ್ಕೂ ಮುನ್ನ ತಮ್ಮ ಹೇಳಿಕೆಯನ್ನು ಸಮರ್ಥಿಸುವ ಪ್ರಯತ್ನ ಮಾಡಿದರು. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More