Kantara 2: ‘ಕಾಂತಾರ 2 ಅಂತ ನೀವೇ ಎಲ್ಲ ಹೇಳ್ತಿದ್ದೀರಿ..’; ಸೀಕ್ವೆಲ್ ಬಗ್ಗೆ ಕೇಳಿದ್ದಕ್ಕೆ ರಿಷಬ್ ಶೆಟ್ಟಿ ಉತ್ತರ
Rishab Shetty | Kantara Sequel: ‘ಕಾಂತಾರ’ ಸಿನಿಮಾಗೆ ಸೀಕ್ವೆಲ್ ಬರಲಿ ಎಂಬುದು ಅಭಿಮಾನಿಗಳ ಬಯಕೆ. ರಿಷಬ್ ಶೆಟ್ಟಿ ಹೋದಲ್ಲಿ ಬಂದಲ್ಲೆಲ್ಲ ಅವರಿಗೆ ಈ ಬಗ್ಗೆಯೇ ಪ್ರಶ್ನೆ ಎದುರಾಗುತ್ತಿದೆ.
ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆಗಿದ್ದಾರೆ. ಈಗ ಅವರ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ಕುತೂಹಲ ಸೃಷ್ಟಿ ಆಗಿದೆ. ‘ಕಾಂತಾರ 2’ (Kantara 2) ಬರಲಿದೆಯೇ ಎಂದು ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ. ಈ ಬಗ್ಗೆ ಕೇಳಿದ್ದಕ್ಕೆ ರಿಷಬ್ ಅವರು, ‘ಎಲ್ಲ ನೀವೇ ಹೇಳ್ತಿದ್ದೀರಿ..’ ಎಂದು ನಕ್ಕು ಸುಮ್ಮನಾಗಿದ್ದಾರೆ. ಜ.13ರಂದು ಚಿಕ್ಕಬಳ್ಳಾಪುರ ಉತ್ಸವದಲ್ಲಿ ಮಾತಿಗೆ ಸಿಕ್ಕ ಅವರು ‘ಪಾರ್ಟ್ 2’ ಕುರಿತು ಹೆಚ್ಚೇನೂ ವಿವರ ಬಿಟ್ಟುಕೊಟ್ಟಿಲ್ಲ. ‘ಕಾಂತಾರ’ (Kantara Movie) ಚಿತ್ರಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಈವರೆಗೂ ಅವರು ಅಧಿಕೃತವಾಗಿ ಎಲ್ಲಿಯೂ ಮಾತನಾಡಿಲ್ಲ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ


