‘ಇದು ಕರ್ಮ’; ಇಶನ್ ಕಿಶನ್​ಗೆ ಚೆನ್ನೈ ಫ್ಯಾನ್ಸ್ ತಿರುಗೇಟು

Updated on: May 28, 2026 | 8:52 AM

ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಪಂದ್ಯದಲ್ಲಿ ಇಶನ್ ಕಿಶನ್ ಅವರು ನಡೆದುಕೊಂಡ ರೀತಿ ಚರ್ಚೆಗೆ ಗ್ರಾಸವಾಗಿತ್ತು. ಏಕೆಂದರೆ, ಅವರು ಚೆನ್ನೈ ಫ್ಯಾನ್ಸ್ ಕಡೆ ತಿರುಗಿ ಹೋಗುವಂತೆ ಸೂಚನೆ ನೀಡಿದ್ದರು. ಈಗ ಕರ್ಮ ಸುತ್ತಿಕೊಂಡು ಬಂದಿದೆ ಎಂದು ಚೆನ್ನೈ ಫ್ಯಾನ್ಸ್ ತಿರುಗೇಟು ನೀಡುತ್ತಾ ಇದ್ದಾರೆ. ಇದು ನಿಜ ಎಂದು ಅನೇಕರಿಗೆ ಅನಿಸಿದೆ.

ಚೆನ್ನೈ vs ಎಸ್​​ಆರ್​ಎಚ್​ ಪಂದ್ಯದಲ್ಲಿ ಹೈದರಾಬಾದ್ ತಂಡ ಗೆದ್ದು ಬೀಗಿತ್ತು. ಇದಾದ ಬಳಿಕ ಇಶನ್ ಕಿಶನ್ ಅವರು ನಡೆದುಕೊಂಡ ರೀತಿ ಚರ್ಚೆಗೆ ಗ್ರಾಸವಾಗಿತ್ತು. ‘ವಿಸಿಲ್ ಹೊಡೆಯುತ್ತಾ ಮನೆಗೆ ಹೋಗಿ’ ಎಂದು ಕಿಶನ್ ಹೇಳಿದ್ದರು. ಅಲ್ಲದೆ, ಹೋಗಿ ಹೋಗಿ ಎಂದು ಸನ್ನೆ ಮಾಡಿದ್ದರು. ಈಗ ಎಲಿಮಿನೇಟರ್ ಪಂದ್ಯದಲ್ಲಿ ಇಶಾನ್ ತಂಡವೇ ಹೊರ ಹೋಗಿದ್ದಾರೆ. ಇದಾದ ಬಳಿಕ ಚೆನ್ನೈ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಇದನ್ನು ಕರ್ಮ ಎಂದು ಕರೆದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 28, 2026 08:51 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More