ನನ್ನ ರಾಜಕೀಯ ಬದುಕಿನ 62 ವರ್ಷಗಳಲ್ಲಿ ಇಂಥ ಕೆಟ್ಟ ಸರ್ಕಾರವನ್ನು ಯಾವತ್ತೂ ನೋಡಿರಲಿಲ್ಲ: ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Nov 08, 2024 | 2:44 PM

ನಿಖಿಲ್ ಕುಮಾರಸ್ವಾಮಿ ಗೆದ್ದಾಕ್ಷಣ ತಾನು ವಿಶ್ರಮಿಸುವ ಪ್ರಯತ್ನ ಮಾಡಲ್ಲ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಬೇಕಿದೆ, ತನ್ನ 62-ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರ್ಕಾರವನ್ನು ಯಾವತ್ತೂ ನೋಡಿರಲಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ಮಂಡ್ಯ: ನಗರದಲ್ಲಿಂದು ಮಾಧ್ಯಮ ಗೋಷ್ಠಿಯೊಂದನ್ನು ನಡೆಸಿ ಮಾತಾಡಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಡಿಕೆ ಶಿವಕುಮಾರ್ ತಮ್ಮನ್ನು ತಾವು ಹೆಚ್ ಡಿ ಕುಮಾರಸ್ವಾಮಿಯವರೊಂದಿಗೆ ಹೋಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಒಬ್ಬ ಗುತ್ತಿಗೆದಾರನ ಮೂಲಕ 120 ಕೋಟಿ ರೂ. ಹಣ ಖರ್ಚು ಮಾಡಿ ಕುಮಾರಸ್ವಾಮಿಯನ್ನು ಸೋಲಿಸುವ ಪ್ರಯತ್ನ ಮಾಡಿದರು, ಆದರೆ ಮಂಡ್ಯದ ಜನತೆ ತಮ್ಮ ಕೈಯಿಂದ ದುಡ್ಡು ಖರ್ಚು ಮಾಡಿ ಕುಮಾರಸ್ವಾಮಿ ಪರ ಕೆಲಸ ಮಾಡಿ ಗೆಲ್ಲಿಸಿದರು ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಈ ಇಳಿ ವಯಸ್ಸಿನಲ್ಲಿ ಏನು ಹೇಳುತ್ತೇನೆ ಎಂದು ಕೇಳುವ ಕುತೂಹಲ ಜೆಡಿಎಸ್ ಮುಖಂಡರಿಗಿದೆ: ದೇವೇಗೌಡ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.