ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಅಲ್ಲಿ ತಮಗೆ ಕೆಲವು ಸೌಕರ್ಯಗಳು ಸಿಗುತ್ತಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಡಿಜಿಪಿ ಅಲೋಕ್ ಕುಮಾರ್ ಅವರು ಸ್ವತಃ ದರ್ಶನ್ ಅವರ ಸೆಲ್ಗೆ ಭೇಟಿ ನೀಡಿದಾಗ ಅವರು ತೊಂದರೆಗಳ ಬಗ್ಗೆ ಹೆಚ್ಚೇನೂ ಹೇಳಿಕೊಂಡಿಲ್ಲ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಆಗಿರುವ ದರ್ಶನ್ ಅವರು ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ಇದ್ದಾರೆ. ಅಲ್ಲಿ ತಮಗೆ ಕೆಲವು ಸೌಕರ್ಯಗಳು ಸಿಗುತ್ತಿಲ್ಲ ಎಂದು ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರು ಸ್ವತಃ ದರ್ಶನ್ ಅವರ ಸೆಲ್ಗೆ ಭೇಟಿ ನೀಡಿದಾಗ ಅವರು ತೊಂದರೆಗಳ ಬಗ್ಗೆ ಹೆಚ್ಚೇನೂ ಹೇಳಿಕೊಂಡಿರಲಿಲ್ಲ. ಆ ಬಗ್ಗೆ ಟಿವಿ9ಗೆ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ‘ಮೇ 15ರಂದು ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಸಮಸ್ಯೆ ಆಲಿಸಿದ್ದೇನೆ. ಕೆಲವು ದೂರುಗಳು ಇದ್ದವು. ಅದನ್ನೆಲ್ಲ ಪರಿಶೀಲನೆ ಮಾಡಿದೆ. ದರ್ಶನ್ (Darshan) ಇರುವ ಸೆಲ್ಗೂ ಹೋಗಿದ್ದೆ. ಕುಟುಂಬದವರನ್ನು ಭೇಟಿ ಮಾಡಲು ಅವಕಾಶ ಬೇಕು ಮತ್ತು ಫೋನ್ ಮಾಡಲು ಸಮಯ ಕೊಡಬೇಕು ಎಂಬುದನ್ನು ಬಿಟ್ಟರೆ ಬೇರೆ ಏನೂ ಸಮಸ್ಯೆ ಇಲ್ಲ ಎಂದು ಅವರು ಹೇಳಿದರು’ ಎಂದಿದ್ದಾರೆ ಅಲೋಕ್ ಕುಮಾರ್. ಜಾಮೀನು ಪಡೆಯಬೇಕು ಎಂಬ ನಿರೀಕ್ಷೆಯಲ್ಲಿದ್ದ ದರ್ಶನ್ ಅವರಿಗೆ ನಿರಾಸೆ ಆಗಿದೆ. ಸದ್ಯಕ್ಕೆ ಅವರ ಜೈಲುವಾಸ ಮುಂದುವರಿದಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

